ವಾರ್ತಾ ಇಲಾಖೆ ಆಯುಕ್ತರಾಗಿ ಜಿ. ಜಗದೀಶ್

ಜಿ. ಜಗದೀಶ್
ಬೆಂಗಳೂರು, ಸೆ.28: ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಡಾ.ಪಿ.ಎಸ್.ಹರ್ಷ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರಕಾರ, ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅವರಿಗೆ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಯಾಗಿರುವ ಜೇಮ್ಸ್ ತಗರನ್ ಆದೇಶ ಹೊರಡಿಸಿದ್ದಾರೆ.
Next Story





