Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ ಬೀಚ್‌ಗೆ ಬರುವ ಪ್ರವಾಸಿಗರಿಗೆ...

ಮಲ್ಪೆ ಬೀಚ್‌ಗೆ ಬರುವ ಪ್ರವಾಸಿಗರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಡಿಸಿ ಕೂರ್ಮ ರಾವ್ ಕರೆ

ವಾರ್ತಾಭಾರತಿವಾರ್ತಾಭಾರತಿ28 Sept 2021 8:57 PM IST
share
ಮಲ್ಪೆ ಬೀಚ್‌ಗೆ ಬರುವ ಪ್ರವಾಸಿಗರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಡಿಸಿ ಕೂರ್ಮ ರಾವ್ ಕರೆ

ಉಡುಪಿ, ಸೆ.28:ಮಲ್ಪೆ ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ ಅವರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಂಜೆ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಲ್ಪೆ ಬೀಚ್‌ಗೆ ದೇಶ-ವಿದೇಶಗಳಿಂದ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸಿಗರ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಾಹನಗಳ ಸುಗಮ ಸಂಚಾರಕ್ಕೆ ಉತ್ತಮ ರಸ್ತೆ, ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಕಲ್ಪಿಸಿ ಇನ್ನಷ್ಟು ಪ್ರವಾಸಿಗರನ್ನು ಆರ್ಕಷಿಸುವಂತೆ ನೋಡಿಕೊಳ್ಳಬೇಕು ಎಂದರು.

ಮಲ್ಪೆ ಬೀಚ್‌ನಲ್ಲಿ ಈಗಾಗಲೆ ಕೈಗೊಂಡಿರುವ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲಿ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ. ಪ್ರವಾಸಿಗರ ಉಪಯೋಗಕ್ಕೆ ಅನುವು ಮಾಡಿಕೊಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲ್ಪೆ ಬೀಚ್‌ನಲ್ಲಿ ಅತ್ಯಾಧುನಿಕ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸಮಗ್ರ ಅಭಿವೃದ್ದಿಯ ನೀಲ ನಕಾಶೆಯನ್ನು ಮುಂದಿನ 20 ವರ್ಷದ ಕಲ್ಪನೆ ಯೊಂದಿಗೆ ತಯಾರಿಸಲು, ಸಮಾಲೋಚಕರೊಂದಿಗೆ ಚರ್ಚಿಸಿ ಶೀಘ್ರವಾಗಿ ಕರಡು ತಯಾರಿಸಲು ತಿಳಿಸಬೇಕು ಎಂದರು.

ಮಲ್ಪೆ ಬೀಚ್‌ನಿಂದ ಸೈಂಟ್‌ಮೆರಿಸ್ ದ್ವೀಪಕ್ಕೆ ಹೋಗುವ ಸ್ಪೀಡ್‌ಬೋಟ್ ಗಳು, ಮಲ್ಪೆ ಬಂದರಿನಿಂದ ಹೋಗುವ ದೊಡ್ಡ ಬೋಟ್‌ಗಳು, ಮಲ್ಪೆ ಬೀಚ್ ಪ್ರದೇಶದಲ್ಲಿ ರೌಂಡಿಂಗ್ ಬೋಟ್ ಹಾಗೂ ವಾಟರ್ ಸ್ಕೂಟಿ ಬೋಟುಗಳು ಮತ್ತಿತರ ಜಲಕ್ರೀಡೆಗಳನ್ನು ನಡೆಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಅವುಗಳಿಗೆ ಚಾಲನೆ ನೀಡುವಂತೆ ಸೂಚನೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಬೀಚ್‌ಗೆ ಬರುವ ಪ್ರವಾಸಿಗರಿಗೆ ಸಮುದ್ರದ ಅಪಾಯದ ಸ್ಥಳಗಳ ಬಗ್ಗೆ ಮಾಹಿತಿ ಕೊರತೆಯಿಂದಾಗಿ ಪ್ರಾಣಾಪಾಯಗಳು ಸಂಭವಿಸುತ್ತಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಸಮುದ್ರ ತೀರದಲ್ಲಿ ಮೈಕ್ ಮೂಲಕ ಎಚ್ಚರಿಕೆ ಸಂದೇಶಗಳನ್ನು ರವಾನಿಸಬೇಕು. ಒಂದೊಮ್ಮೆ ಅಪಾಯಕ್ಕೆ ಒಳಗಾದ ವರನ್ನು ರಕ್ಷಿಸಲು ಜೀವರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಸೂಚನೆ ನೀಡಿದರು.

ಶಾಸಕ ಕೆ ರಘುಪತಿ ಭಟ್ ಮಾತನಾಡಿ, ಪಡುಕೆರೆ ಬೀಚ್ ಸಹ ಉತ್ತಮ ಪ್ರವಾಸಿ ಸ್ಥಳವಾಗಿದ್ದು, ಅಲ್ಲಿಯೂ ಸಹ ಪ್ರವಾಸಿಗರ ಆಗಮನ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕು. ಬೀಚ್‌ನ ಅಭಿವೃದ್ಧಿಯ ನಿರ್ವಹಣೆಗೆ ಸ್ಥಳೀಯ ಜನರನ್ನು ಒಳಗೊಂಡ, ಭಜನಾ ಮಂದಿರದ ಸದಸ್ಯರುಗಳು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸುವುದರಿಂದ ನಿರ್ವಹಣೆಗೆ ಹೆಚ್ಚಿನ ಅನುಕೂ ವಾಗಲಿದೆ ಎಂದರು.

ಬೀಚ್‌ನಲ್ಲಿ ಪ್ರವಾಸಿಗರ ಮನರಂಜನೆ ಹಾಗೂ ಪ್ರಕೃತಿ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಹೆಚ್ಚು ಹೆಚ್ಚು ಪ್ರವಾಸಿ ಬೋಟುಗಳು, ಜಲಕ್ರೀಡೆ ಹಾಗೂ ಮತ್ತಿತರ ಉತ್ತಮ ಚಟುವಟಿಕೆಗಳನ್ನು ಕೈಗೊಂಡಾಗ ಪ್ರವಾಸಿಗರಿಗೆ ಹೆಚ್ಚಿನ ಮನೋಲ್ಲಾಸ ಸಿಗುತ್ತದೆ. ಅದಕ್ಕೆ ಅವಕಾಶ ಕಲ್ಪಿಸಬೇಕು ಎಂದರು. ಪಡುಕೆರೆ ಸಮುದ್ರತೀರಕ್ಕೆ ಹೊಂದಿಕೊಂಡಿರುವ ಸರಕಾರಿ ಜಾಗವನ್ನು ಮರಿನ್ ಬೋರ್ಡ್‌ಗೆ ಹಸ್ತಾಂತರಿಸಲು ಸರಕಾರಕ್ಕೆ ಪತ್ರ ಬರೆಯುವಂತೆ ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ. ಮಾತ ನಾಡಿ, ಜಿಲ್ಲೆಯ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ಥಳೀಯ ಕರಕುಶಲ ವಸ್ತಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಸೀವಾಕ್ ಪ್ರದೇಶದಲ್ಲಿ ಮಾರುಕಟ್ಟೆ ಮಳಿಗೆಯನ್ನು ನಿರ್ಮಿಸುವಂತೆ ತಿಳಿಸಿದರಲ್ಲದೇ, ಹೆಚ್ಚೆಚ್ಚು ಪ್ರವಾಸಿಗರು ಆಗಮಿಸುವುದರಿಂದ ಸ್ಥಳೀಯ ಜನರಿಗೆ ಉದ್ಯೋಗ ದೊರೆಯುವುದರ ಜೊತೆಗೆ ಅರ್ಥಿಕ ಲಾಭವಾಗುತ್ತದೆ ಎಂದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಉಪಾಧ್ಯಕ್ಷೆ ಲಕ್ಷ್ಮೀಮಂಜುನಾಥ್ ಕೊಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್‌ಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಆಯುಕ್ತ ಉದಯ ಶೆಟ್ಟಿ, ನಗರಸಭಾ ಸದಸ್ಯರಾದಎಡ್ಲಿನ್ ಕರ್ಕಡ, ಸುಂದರ್ ಕಲ್ಮಾಡಿ, ವಿಜಯ ಕೊಡವೂರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X