ಅ. 2ರಂದು ಬಿಜೆಪಿಯಿಂದ ಖಾದಿ ಮೇಳ
ಉಡುಪಿ, ಸೆ.28: ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಅಂಗವಾಗಿ ಅ. 2ರಂದು ನಡೆಯಲಿರುವ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಾಳೆ (ಸೆ.29 ಬುಧವಾರ) ಬೆಳಗ್ಗೆ 9:30ರಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಉಡುಪಿ ಇದರ ಸಹಯೋಗದೊಂದಿಗೆ ’ಖಾದಿ ಮೇಳ’ ನಡೆಯಲಿದೆ.
ಈ ಖಾದಿ ಮೇಳದಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಾದಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.
Next Story





