ಮಂಗಳೂರು; ಮುಂದುವರಿದ ಟ್ರಾಫಿಕ್ ಅಭಿಯಾನ: 900 ವಾಹನಗಳ ವಿರುದ್ಧ ಕೇಸು, 4.5 ಲಕ್ಷ ರೂ. ದಂಡ

ಮಂಗಳೂರು, ಸೆ. 28: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಅಭಿಯಾನದ ಭಾಗದಲ್ಲಿ 900 ವಾಹನಗಳ ವಿರುದ್ಧ ಕೇಸು ದಾಖಲಾಗಿದ್ದು, 4,50,000 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳವಾರ ದೋಷಯುಕ್ತ ನಂಬರ್ ಪ್ಲೇಟ್‌ಗಳನ್ನು ಹೊಂದಿದ್ದ ವಾಹನಗಳ ಸವಾರರಿಂದ ದಂಡ ವಸೂಲಿ ಮಾಡಲಾಗಿದೆ. ವಾಹನಗಳಲ್ಲಿನ ಕಾನೂನು ಬಾಹಿರ ಟಿಂಟ್‌ಗಳನ್ನು ಪತ್ತೆ ಹಚ್ಚುವ ಕಾರ್ಯವೂ ನಡೆಯುತ್ತಿದೆ. ರಸ್ತೆ ಅಪರಾಧ, ದರೋಡೆ ಸೇರಿದಂತೆ ಮಹಿಳೆಯರು, ಹಿರಿಯ ನಾಗರಿಕರ ಸುರಕ್ಷತೆಗೆ ಧಕ್ಕೆ ಬರುವಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತಿದೆ. ಅಕ್ಟೋಬರ್ 2ರವರೆಗೆ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.













