Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮಹಿಳಾ ಆಯೋಗದ ಎದುರು ಆಪ್...

ಬೆಂಗಳೂರು: ಮಹಿಳಾ ಆಯೋಗದ ಎದುರು ಆಪ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Sept 2021 10:08 PM IST
share
ಬೆಂಗಳೂರು: ಮಹಿಳಾ ಆಯೋಗದ ಎದುರು ಆಪ್ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದರೂ, ಗಂಭೀರವಾಗಿ ಪರಿಗಣಿಸದೆ ರಾಜ್ಯ ಮಹಿಳಾ ಆಯೋಗವು ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದರು.

ಮಂಗಳವಾರ ಇಲ್ಲಿನ ಕೆಜಿ ರಸ್ತೆಯ ಮಹಿಳಾ ಆಯೋಗ ಕಚೇರಿ ಮುಂಭಾಗ ಜಮಾಯಿಸಿದ ಆಪ್ ಸದಸ್ಯರು, ಆಯೋಗದ ಕಚೇರಿಗೆ ಬೀಗ ಜಡಿಯಲಾಗುವುದೆಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಆಪ್ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ, ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಅಂದರೆ ಪ್ರತಿದಿನ ಒಂದಕ್ಕಿಂತ ಹೆಚ್ಚು ಮಹಿಳೆಯರ ಮೇಲೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದಾರೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ ಎಂದರು.

ಇನ್ನು, 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ. ಇವೆಲ್ಲವನ್ನು ನೋಡಿಕೊಂಡು ಸುಮ್ಮನೆ ಕುಳಿತಿರುವ ಮಹಿಳಾ ಆಯೋಗದ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮತ್ತೊಂದೆಡೆ ಇತ್ತೀಚೆಗೆ ಬಿಡುಗಡೆಯಾದ ಎನ್‍ಸಿಆರ್‍ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

6 ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ. ಈ ಪೈಕಿ ಮಹಿಳಾ ಆಯೋಗದ ಅಧ್ಯಕ್ಷರು ಎಷ್ಟು ಸಂತ್ರಸ್ತರನ್ನು ಭೇಟಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಆಮ್ ಆದ್ಮಿ ಪಾರ್ಟಿಯ ಮಹಿಳಾ ನಾಯಕಿ ಉಷಾ ಮೋಹನ್ ಮಾತನಾಡಿ, ಹಾಲಿ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟರೋ ಎಂಬ ಅನುಮಾನ ಕಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆರ್. ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ. ಕೋಟ್ಯಂತರ ಅನುದಾನವನ್ನು, ಸೌಲಭ್ಯಗಳನ್ನು ಬಳಸಿಕೊಂಡು ದುಂದುವೆಚ್ಚ ಮಾಡುತ್ತಿರುವ ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ಆಯೋಗದ ಪುನಾರಚನೆ ಆಗಲಿ ಎಂದು ಆಗ್ರಹಿಸಿದರು.

ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಮಾತನಾಡಿ, ಜಾರಕಿಹೊಳಿ ಪ್ರಕರಣದಲ್ಲಿ ವಿಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ನಂತರ ಅದು ಹನಿಟ್ರಾಪ್ ಎಂದು ಜಾರಕಿಹೊಳಿಯವರೇ ಹೇಳಿದರು. ಇದರಿಂದ ವಿಡಿಯೋ ನಕಲಿ ಅಲ್ಲವೆಂದು ಸಾಬೀತಾದಂತಾಯಿತು.

ಹಾಗಾದರೆ ವಿಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳಿದ್ದೇಕೆ? ಅದು ಕಾಮುಕರನ್ನು ರಕ್ಷಿಸುವ ಪ್ರಯತ್ನವಲ್ಲವೇ? ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಸರಕಾರವು ಸಂತ್ರಸ್ತೆಯ ಪರ ನಿಲ್ಲಬೇಕು. ಆದರೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಯುವತಿಯನ್ನು ಜಾರಕಿಹೊಳಿ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಇಡೀ ಸರಕಾರವೇ ಆರೋಪಿಯ ರಕ್ಷಣೆಗೆ ನಿಂತಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಆಪ್ ಮುಖಂಡರಾದ ವೀಣಾ ಸೆರ್ರಾವ್, ಪುಷ್ಪಾ ಕೇಶವ್, ರಾಜಶೇಖರ್ ದೊಡ್ಡಣ್ಣ, ಯೋಗಿತಾ ರೆಡ್ಡಿ, ಪ್ರಶಾಂತಿ, ಅಶೋಕ್ ಮೃತ್ಯುಂಜಯ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X