Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರಿನಲ್ಲಿ ಅ.11-12ರಂದು...

ಬೆಂಗಳೂರಿನಲ್ಲಿ ಅ.11-12ರಂದು ‘ಉದ್ಯಮಿಯಾಗು-ಉದ್ಯೋಗ ಕೊಡು ಹಾಗೂ ಕೈಗಾರಿಕಾ ಅದಾಲತ್’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 Sept 2021 10:11 PM IST
share

ಬೆಂಗಳೂರು, ಸೆ.28: ವಿದ್ಯಾವಂತ ಯುವಕರನ್ನು ಉದ್ಯಮದತ್ತ ಆಕರ್ಷಿಸಿ, ಸ್ವಯಂ ಉದ್ಯಮಿಗಳಾಗಿ ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಹಮ್ಮಿಕೊಂಡಿರುವ ‘ಉದ್ಯಮಿಯಾಗು ಉದ್ಯೋಗ ಕೊಡು ಹಾಗೂ ಕೈಗಾರಿಕಾ ಅದಾಲತ್' ಯೋಜನೆಗೆ ಅ.11ರಂದು ವಿದ್ಯುಕ್ತ ಚಾಲನೆ ದೊರೆಯಲಿದೆ.

ಅ.11 ಮತ್ತು 12ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ದಿನ ಉದ್ಯಮಿಯಾಗು ಉದ್ಯಮಿ ಕೊಡು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. 12ರಂದು ಕೈಗಾರಿಕಾ ಅದಾಲತ್ ನಡೆಯಲಿದ್ದು, ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ವಿನೂತನ ಕಾರ್ಯಕ್ರಮ ಇದಾಗಿದೆ.

ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಕಂದಾಯ ವಿಭಾಗದ ಕೈಗಾರಿಕಾ ಸಂಸ್ಥೆಗಳ ಮುಖಂಡರ ಜೊತೆ ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು.

ಬೆಂಗಳೂರು ಕಂದಾಯ ವಿಭಾಗದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಉದ್ಯಮಿಗಳು ಭಾಗವಹಿಸಲಿದ್ದಾರೆ. ಮೊದಲ ದಿನ ಉದ್ಯಮಿಯಾಗು ಉದ್ಯೋಗ ಕೊಡು ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉದ್ಯಮಿಗಳು ಕೈಗಾರಿಕಾ ಕ್ಷೇತ್ರದಲ್ಲಿ ಯಶಸ್ವಿ ಸಾಧಿಸಿರುವ ಕನ್ನಡಿಗರೇ ಆದ ಕೋ ರಾಧಾಕೃಷ್ಣ, ಜಿರೋದಾ ನಿತನ್, ನಿಖಿಲ್ ಕಾಮತ್, ಪಡ್ಕೆ ಸೇರಿದಂತೆ ಮತ್ತಿತರ ಉದ್ಯಮಿಗಳನ್ನು ಆಹ್ವಾನಿಸಿ ನೂತನ ಉದ್ಯಮಿಗಳಿಗೆ ವಿಶೇಷ ಉಪನ್ಯಾಸ, ಮಾರ್ಗದರ್ಶನ, ಸಲಹೆ ನೀಡಲಿದ್ದಾರೆ.

ಬೆಂಗಳೂರು ಕಂದಾಯ ವಿಭಾಗದ ವಿವಿಧ ಜಿಲ್ಲೆಗಳಿಂದ ಒಟ್ಟು 10 ಸಾವಿರ ಜನರು ಆಗಮಿಸಲಿದ್ದು, ವೈಮಾನಿಕ ಕ್ಷೇತ್ರ, ರಕ್ಷಣಾ ಕ್ಷೇತ್ರದಲ್ಲಿ ಉದ್ಯೋಗಗಳು, ಹೂಡಿಕೆಗಿರುವ ಅವಕಾಶಗಳ ಬಗ್ಗೆ ಚರ್ಚೆ ನಡೆಯಲಿದೆ. ಸಾರ್ಟ್ ಅಪ್ ಉದ್ಯೋಗ ಸೃಷ್ಟಿಸುವುದು, ಆರೋಗ್ಯ ಕ್ಷೇತ್ರ, ಶಿಕ್ಷಣ, ಎಜು ಟೆಕ್ನಾಲಜಿ, ಹೂಡಿಕೆ ಮಾಡುವುದು, ಬ್ಯಾಂಕಿಂಗ್ ವಲಯದಿಂದ ಸಾಲಸೌಲಭ್ಯ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳು ಜರುಗಲಿವೆ.

ಜಿಲ್ಲಾವಾರು ವರ್ಗೀಕರಣ: 2ನೇ ದಿನದ ಕೈಗಾರಿಕಾ ಅದಾಲತ್‍ನಲ್ಲಿ ಪ್ರಮುಖವಾಗಿ ಕೈಗಾರಿಕಾ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ಬಗ್ಗೆ ಸಚಿವರು, ಇಲಾಖೆಯ ಅಧಿಕಾರಿಗಳು ಪರಿಹರಿಸಲು ಆದ್ಯತೆ ನೀಡುವರು.

ಕೈಗಾರಿಕಾ ಅದಾಲತ್ ನಡೆಸುವ ಸಂಬಂಧ ಜಿಲ್ಲಾವಾರು ವರ್ಗೀಕರಣ ಮಾಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಕೈಗಾರಿಕಾ ಸಂಘಸಂಸ್ಥೆಗಳು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದರೆ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಿದ್ದಾರೆ.

ಸಭೆಯಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಅದಾಲತ್, ಕಾರ್ಯಾಗಾರವನ್ನು 6 ವಿಭಾಗಗಳಲ್ಲಿ ನಡೆಸಲಾಗುವುದು. ಸರಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ, ಉದ್ಯಮಿದಾರರ ಮನವೊಲಿಸಲಿದೆ ಎಂದು ಹೇಳಿದರು.

ಸಮಸ್ಯೆಗಳ ಇತ್ಯರ್ಥ: ಇನ್ನು ಸಭೆಯಲ್ಲಿ ಬಹುತೇಕ ಸಂಘಸಂಸ್ಥೆಯ ಮುಖ್ಯಸ್ಥರು ಪ್ರಮುಖವಾಗಿ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಭೂತ ಸೌಲಭ್ಯಗಳ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಥಳದಲ್ಲೇ ಸ್ಪಂದಿಸಿದ ಸಚಿವ ನಿರಾಣಿ, ಉದ್ಯಮಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರಕಾರ ಬದ್ಧವಾಗಿದೆ. ಇದರ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ವಾಗ್ದಾನ ಮಾಡಿದರು. 

ಯಾರಿಗೆ ಎಷ್ಟು ವಿದ್ಯುತ್ ಬೇಕು ಎಂದು ಅಂದಾಜಿಸಲಾಗುವುದು.  ಈ ಸಂಬಂಧ ಇಂಧನ ಸಚಿವರ ಜೊತೆ ಖುದ್ದು ನಾನೇ ಸಭೆ ಕರೆಯಲಿದ್ದೇನೆ. ನೀವು ಆತಂಕಕ್ಕೆ ಒಳಗಾಗಬೇಡಿ. ಭೂಮಿ, ನೀರು, ವಿದ್ಯುತ್ ಮತ್ತು ನುರಿತ ಕೆಲಸಗಾರರನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಹೆಚ್ಚು ಕೈಗಾರಿಕೆಗಳು ಬರಬೇಕು, ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಅವರು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X