ದತ್ತಪೀಠ ವಿವಾದ: ಹೈಕೋರ್ಟ್ ಆದೇಶ ಸ್ವಾಗತಿಸಿದ ಸಚಿವ ಸುನೀಲ್ ಕುಮಾರ್

ಬೆಂಗಳೂರು, ಸೆ.28: ಚಿಕ್ಕಮಗಳೂರಿನ ಬಾಬಾಬುಡನ್‍ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯಗಳ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನೀಲ್ ಕುಮಾರ್ ಸ್ವಾಗತಿಸಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿರುವ ಅವರು, ಬಾಬಾಬುಡನ್‍ಗಿರಿ ದತ್ತಾತ್ರೇಯ ಪೀಠ ಕುರಿತಂತೆ ಮಂಗಳವಾರ ಹೈಕೋರ್ಟ್ ವಿಶೇಷ ತೀರ್ಪು ಕೊಟ್ಟಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದರು.
ದಶಕಗಳ ಹೋರಾಟದಿಂದಾಗಿ ಇಂತಹ ಮಹತ್ವದ ತೀರ್ಪುನ್ನು ಹೈಕೋರ್ಟ್ ನೀಡಿದೆ. ದತ್ತಪೀಠದಲ್ಲಿ ದತ್ತಾತ್ರೇಯರ ಪಾದುಕೆಗಳಿಗೆ ಪ್ರತಿದಿನ ಪೂಜೆ ಮಾಡುವ ಅವಕಾಶ ಎಲ್ಲರಿಗೂ ಸಿಗಲಿ ಎಂದು ನಾನು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.
Next Story





