ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಲಿ: ಜಿ.ಎ. ಬಾವಾ
ಬೆಂಗಳೂರು, ಸೆ.28: ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳುವ ಮೂಲಕ ಸಮಾಜದ ಆಸ್ತಿ ಆಗಬೇಕೆಂದು ನಿವೃತ್ತ ಪೊಲೀಸ್ ಅಧಿಕಾರಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಜಿ.ಎ.ಬಾವಾ ಹೇಳಿದ್ದಾರೆ.
ಮಂಗಳವಾರ ನಗರದ ಹಮೀದ್ ಶಾ ಕಾಂಪ್ಲೆಕ್ಸ್‍ನ ಐಟಿಐ ಕಟ್ಟಡದ ಉರ್ದು ಹಾಲ್‍ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ದಾರಿ ತಪ್ಪಿಸುವವರು ಸಾಕಷ್ಟು ಜನರಿರುತ್ತಾರೆ. ಆ ಕಡೆಗೆ ಗಮನ ಹರಿಸದೇ ನಿಮ್ಮ ಗುರಿ ಕಡೆಗೆ ಸಾಗುವ ಪ್ರಯತ್ನ ಮಾಡಬೇಕು. ಸಮಾಜದ ಆಸ್ತಿ ಆಗಬೇಕೆಂದು ಹೇಳಿದರು.
ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅವರ ಬದುಕು ಮತ್ತು ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಐಎಎಸ್ ನಿವೃತ್ತ ಅಧಿಕಾರಿ ಅನ್ವರ್ ಪಾಷಾ, ಜಿ.ಉಮಾಶಂಕರ್ ಉಪಸ್ಥಿತರಿದ್ದರು.





