Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2023ರ ಚುನಾವಣೆಯಲ್ಲಿ ಜೆಡಿಎಸ್ ನಿಂದ...

2023ರ ಚುನಾವಣೆಯಲ್ಲಿ ಜೆಡಿಎಸ್ ನಿಂದ 30-35 ಮಹಿಳೆಯರಿಗೆ ಟಿಕೆಟ್: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 Sept 2021 1:30 PM IST
share
2023ರ ಚುನಾವಣೆಯಲ್ಲಿ ಜೆಡಿಎಸ್ ನಿಂದ 30-35 ಮಹಿಳೆಯರಿಗೆ ಟಿಕೆಟ್: ಕುಮಾರಸ್ವಾಮಿ

ಬೆಂಗಳೂರು, ಸೆ.29: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲಿಡಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಜನತಾ ಪರ್ವ 1.O ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತೋಟದಲ್ಲಿ ಹಮ್ಮಿಕೊಳ್ಳಲಾಗಿರುವ 3ನೆ ದಿನದ ಸಂಘಟನಾ ಕಾರ್ಯಗಾರ ಆರಂಭವಾಗುವುದಕ್ಕೆ ಮುನ್ನ ಅವರು  ಮಾಧ್ಯಮಗಳ ಜತೆ ಮಾತನಾಡುತ್ತಿದ್ದರು.

ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು  ಮಹಿಳೆಯರಿಗೆ ಕೊಡಲಾಗುವುದು ಎಂದು ಅವರು ತಿಳಿಸಿದರು.

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಇದನ್ನು ಸರಿ‌ ಮಾಡುವ ಕೆಲಸ ಮಾಡಲಾಗುವುದು ಎಂದ ಅವರು, ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಈ ಕಾರ್ಯಾಗಾರದಿಂದ ಪ್ರಾರಂಭ ಮಾಡುತ್ತೇವೆ ಎಂದರು.

ಮಹಿಳೆಯರಿಗೂ ಟಾಸ್ಕ್:

ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಟಾಸ್ಕ್ ಕೊಡಲಾಗುವುದು. 3ನೇ ದಿನ‌ದ ಇಂದಿನ  ಕಾರ್ಯಾಗಾರದಲ್ಲಿ ಮಹಿಳಾ ಘಟಕದ ಸದಸ್ಯರಿಗೆ ಪಕ್ಷ ಹಾಗೂ ಚುನಾವಣೆಗಾಗಿ ಒಂದು ದಿಕ್ಸೂಚಿ ನಿಗದಿ ಮಾಡಲಾಗುವುದು.30 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿರುವ ಮಹಿಳಾ ಸದಸ್ಯರು ಕಾರ್ಯಾಗಾರದಲ್ಲಿ ಇದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ಇಂದು ಚರ್ಚೆ ಮಾಡುವುದರ ಜತೆಗೆ, ಎಲ್ಲ ಮಹಿಳಾ ನಾಯಕಿಯರಿಗೆ ಸೂಕ್ತ ತರಬೇತಿ ನೀಡಲಾಗುವುದು. ಪ್ರತಿ ಕ್ಷೇತ್ರದಲ್ಲಿ 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡುವ ಜವಾಬ್ದಾರಿಯನ್ನ ಪ್ರತಿ ಮಹಿಳಾ ನಾಯಕಿಯರಿಗೆ ನೀಡಲಾಗುತ್ತದೆ.

ಮಹಿಳೆಯರಿಗೆ 33% ಮೀಸಲು ವಿಧೇಯಕ:

ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು  ಮಹಿಳೆಯರಿಗೆ ಚುನಾವಣೆಯಲ್ಲಿ 33% ಮೀಸಲಾತಿ ಕೊಡಬೇಕು ಅಂತ ಧ್ವನಿ ಎತ್ತಿದ್ದರು. ಆದರೆ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಮೀಸಲಾತಿ ಜಾರಿ ಮಾಡಲಿಲ್ಲ. ಕರ್ನಾಟಕದಿಂದಲೇ ಮಹಿಳಾ ಮೀಸಲಾತಿಗೆ ಧ್ವನಿ ಎತ್ತುವ ಕೆಲಸ ನಾವು ಮಾದುತ್ತೇವೆ. 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 33% ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.

ಮಹಿಳಾ ಕಾರ್ಯಾಗಾರಕ್ಕೆ ಚಾಲನೆ:

ಇದೇ ವೇಳೆ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿ ಹಾಗೂ ಮಹಿಳಾ ಜೆಡಿಎಸ್ ರಾಜ್ಯಾಧ್ಯಕ್ಷೆಯಾದ ಲೀಲಾದೇವಿ ಆರ್ ಪ್ರಸಾದ್ ಅವರು ಕಾರ್ಯಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಕ್ಷಣಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು.

ಲೀಲಾದೇವಿ ಆರ್. ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವದುರ್ಗದ ಮುಂದಿನ ಅಭ್ಯರ್ಥಿ ಕರಿಯಮ್ಮ, ಮಹಿಳಾ ಜನತಾದಳದ ಬೆಂಗಳೂರು ಘಟಕದ ಅಧ್ಯಕ್ಷೆ ರುತ್ ಮನೋರಮಾ ವೇದಿಕೆಯ ಮೇಲಿದ್ದರು.

ಪ್ರತಿ ವಿಧಾನಸಭೆ ಕ್ಷೇತ್ರದಿಂದ ತಲಾ ಇಬ್ಬರಂತೆ ಮಹಿಳಾ ಪ್ರತಿನಿಧಿಗಳು ಕಾರ್ಯಗಾರದಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X