ಅ.2ರಂದು ಎಂಜಿಎಂ ಕಾಲೇಜಿನಲ್ಲಿ ಗಾಂಧಿ ಜಯಂತಿ
ಉಡುಪಿ, ಸೆ.29: ಉಡುಪಿ ಎಂ.ಜಿ.ಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಅ.2ರಂದು ಬೆಳಗ್ಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಲಿದೆ.
ಬೆಳಗ್ಗೆ 9:15ರಿಂದ ಗಾಂಧೀಜಿಗೆ ಪ್ರಿಯವಾದ ರಾಮ್ ಧುನ್ ಭಜನ್‌ಗಳ ಗಾಯನ ಸಮನ್ವಿ ತಂಡದಿಂದ ನಡೆಯಲಿದೆ. ಬೆಳಗ್ಗೆ 10 ರಿಂದ ಸಭಾ ಕಾರ್ಯಕ್ರಮದಲ್ಲಿ ಕೋಟ-ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಪ್ರಶಾಂತ ನೀಲಾವರ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ ಎಸ್. ನಾಯ್ಕ್ ವಹಿಸಲಿದ್ದು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಉಪಸ್ಥಿತರಿರುವರು ಎಂದು ಗಾಂಧಿ ಅಧ್ಯಯನ ಕೇಂದ್ರದ ಪ್ರಕಟಣೆ ತಿಳಿಸಿದೆ.
Next Story





