Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಎನ್‍ಇಪಿ ಪಠ್ಯದಲ್ಲಿ ಇಸ್ರೋ,...

ನೂತನ ಎನ್‍ಇಪಿ ಪಠ್ಯದಲ್ಲಿ ಇಸ್ರೋ, ಬಾಹ್ಯಾಕಾಶ ವಿಜ್ಞಾನದ ಅಂಶಗಳು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ29 Sept 2021 7:04 PM IST
share
ನೂತನ ಎನ್‍ಇಪಿ ಪಠ್ಯದಲ್ಲಿ ಇಸ್ರೋ, ಬಾಹ್ಯಾಕಾಶ ವಿಜ್ಞಾನದ ಅಂಶಗಳು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಸೆ.29: ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಸಾರ ರಚನೆಯಾಗುವ ನೂತನ ಪಠ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸಾಧನೆಗಳು, ಯೋಜನೆಗಳ ವಿಚಾರಗಳನ್ನು ಸೇರ್ಪಡೆಗೊಳಿಸಲು ಇಸ್ರೋದಿಂದ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. 

ಬುಧವಾರ ನಗರದ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಇಸ್ರೋ ಅಂತರಿಕ್ಷ ಭವನದಲ್ಲಿ ಇಸ್ರೋ ಅಧ್ಯಕ್ಷ ಡಾ. ಕೆ.ಶಿವನ್ ಹಾಗೂ ಹಿರಿಯ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಅವರು ಮಾತುಕತೆ ನಡೆಸಿದರು. 

ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಧಾರಿತ ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಮನೋಭಾವ ಮೂಡಿಸುವುದರ ಮೇಲೆ ಭಾರತದ ಭವಿಷ್ಯವಿದೆ. ಶಾಲಾ ಶಿಕ್ಷಣದಲ್ಲಿ ಸರಳವಾಗಿ ಅರ್ಥವಾಗುವಂತೆ ವಿಜ್ಞಾನ, ಗಣಿತವನ್ನು ಪಾಠ ಮಾಡಬೇಕು.ಮಕ್ಕಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಮತ್ತು ಕುತೂಹಲ ಮೂಡಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ ಎಂದು ಡಾ.ಕೆ.ಶಿವನ್ ಹಲವು ಕಾರ್ಯಕ್ರಮಗಳಲ್ಲಿ ಹೇಳಿದ್ದಾರೆ. ಹೀಗಾಗಿ, ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ರಾಜ್ಯದಲ್ಲಿ ಎನ್‍ಇಪಿ ಜಾರಿಗೆ ಅಗತ್ಯವಾದ ಎಲ್ಲ ರೀತಿಯ ಸಲಹೆ, ಸೂಚನೆ, ಮಾರ್ಗದರ್ಶನವನ್ನು ನೀಡಿ ಸಹಕಾರ ನೀಡುವ ಭರವಸೆಯನ್ನು ಶಿವನ್ ನೀಡಿದ್ದಾರೆ. ಅದಕ್ಕಾಗಿ ಇಸ್ರೋದಿಂದ ಸಮಿತಿಯೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗೇಶ್ ಹೇಳಿದರು. 

ಗ್ರಾಮಾಂತರ ಪ್ರದೇಶಗಳು, ಸರಕಾರಿ ಶಾಲೆಗಳ ಮಕ್ಕಳಲ್ಲಿ ಅಪಾರ ಪ್ರತಿಭೆ ಇದೆ. ಉತ್ತಮ ವೇದಿಕೆ, ಅವಕಾಶಗಳು, ಜ್ಞಾನಾರ್ಜನೆಗೆ ಬೇಕಾದ ಸೌಕರ್ಯಗಳನ್ನು ಒದಗಿಸಬೇಕು. ವಿಷಯಗಳನ್ನು ಸರಳವಾಗಿ ಅರ್ಥೈಸಬೇಕು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸರಳವಾಗಿ ಅರ್ಥವಾಗುವಂತೆ ಪಾಠ ಮಾಡಬೇಕು. ಅದಕ್ಕೆ ತಕ್ಕಂತೆ ಪಠ್ಯಗಳನ್ನು ಸಿದ್ಧಪಡಿಸಲು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಟಾಸ್ಕ್ ಫೋರ್ಸ್  ಕಾರ್ಯ ನಿರ್ವಹಿಸುತ್ತಿದೆ ಎಂದು ನಾಗೇಶ್ ತಿಳಿಸಿದರು. 

ಕೌಶಲ್ಯದ ಶಿಕ್ಷಣ ಇಂದಿನ ಅಗತ್ಯವಾಗಿದೆ. ವಿಜ್ಞಾನ, ಬಾಹ್ಯಾಕಾಶದ ಕುರಿತು ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಎನ್‍ಇಪಿ ಜಾರಿ ಕುರಿತು ರಾಜ್ಯ ಸರಕಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು, ಸಲಹೆಗಳನ್ನು ನೀಡುತ್ತೇವೆ ಎಂದು ಸಚಿವರೊಂದಿಗೆ ಮಾತುಕತೆ ವೇಳೆ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದರು.

ಸ್ಪೇಸ್ ಆನ್ ವೀಲ್ಸ್ ರಾಜ್ಯದ ಇತರ ಭಾಗಗಳಿಗೆ: ಇಸ್ರೋದ ಸಾಧನೆಗಳು, ಭವಿಷ್ಯದ ಯೋಜನೆಗಳು, ಸೌರಮಂಡಲ, ಬಾಹ್ಯಾಕಾಶದ ಕುರಿತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿ, ಆಸಕ್ತಿ ಮೂಡಿಸಲು ಇಸ್ರೋ ಆರಂಭಿಸಿರುವ ಸ್ಪೇಸ್ ಆನ್ ವೀಲ್ಸ್ ವಾಹನವು ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮಾಂತರ ಭಾಗಗಳ ಶಾಲೆಗಳಿಗೂ ತೆರಳಲಿದೆ. ಈವರೆಗೆ ಈ ವಾಹನವು ಬೆಂಗಳೂರು ನಗರ ಮತ್ತು ಸುತ್ತ ಮುತ್ತಲಿನ ಭಾಗಗಳಲ್ಲಿ ಮಾತ್ರ ಸಂಚರಿಸುತ್ತಿತ್ತು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X