Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಕ್ಕೆ 5...

ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಬೇಕು: ಸಿದ್ದರಾಮಯ್ಯ

‘ಪ್ರಕೃತಿ ವಿಕೋಪ ನಿಯಮ ತಿರುಚಿದ ಸರಕಾರದ ಕ್ರಮ ಸರಿಯಲ್ಲ’

ವಾರ್ತಾಭಾರತಿವಾರ್ತಾಭಾರತಿ29 Sept 2021 7:51 PM IST
share
ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಬೇಕು: ಸಿದ್ದರಾಮಯ್ಯ

ಬೆಂಗಳೂರು, ಸೆ.29: ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ರಾಜ್ಯ ಸರಕಾರದ ಕ್ರಮ ಸರಿಯಲ್ಲ. ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೆ, ಕೋವಿಡ್‍ನಿಂದ ಮೃತಪಟ್ಟವರ ವಾರಸುದಾರರಿಗೂ 5 ಲಕ್ಷ ರೂ.ಗಳ ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್-19ನ ಎರಡೂ ಅಲೆಗಳಿಂದ ಕನಿಷ್ಠವೆಂದರೂ 4 ಲಕ್ಷ ಜನ ಮರಣ ಹೊಂದಿದ್ದಾರೆ. ಹಾಗಾಗಿ ಕುಟುಂಬಗಳಲ್ಲಿ ದುಡಿಯುವ ಸದಸ್ಯರನ್ನು ಕಳೆದುಕೊಂಡು ಈ ಕುಟುಂಬಗಳು ಅನಾಥವಾಗಿವೆ. ಅಸಂಖ್ಯಾತ ಕುಟುಂಬಗಳಲ್ಲಿ ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡ ಮಕ್ಕಳು ದಿಕ್ಕು ತೋಚದೆ ಕೂತಿದ್ದಾರೆ. ದುಡಿವ ಮಕ್ಕಳನ್ನು ಕಳೆದುಕೊಂಡ ವೃದ್ಧ ತಂದೆ ತಾಯಿಗಳು ತಬ್ಬಲಿಗಳಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ ಅಸಹಾಯಕರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ ನಾಗರಿಕವೆನ್ನಿಸಿಕೊಂಡ ಸರಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳನ್ನಾದರೂ ಕೊಡಬೇಕು ಎಂದು ಒತ್ತಾಯಿಸಿದ್ದೆವು. ಕೇಂದ್ರ ಸರಕಾರ ಕಳೆದ ಸಾಲಿನ ಮಾ.14ರಂದು ಕೋವಿಡ್‍ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ 4 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಎಂದು ಆದೇಶ ಹೊರಡಿಸಿ ಅದೇ ದಿನ ಮಾರ್ಪಡಿಸಿಕೊಂಡಿದೆ ಎಂದು ಅವರು ಟೀಕಿಸಿದ್ದಾರೆ.

ಸರಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ(ಕೇಂದ್ರ ಸರಕಾರ 4 ಲಕ್ಷ, ರಾಜ್ಯ ಸರಕಾರ-1 ಲಕ್ಷ). ಹಾಗಾಗಿ ಕೋವಿಡ್-19ನಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಕೊಡಲೇಬೇಕೆಂದು ಒತ್ತಾಯಿಸಿದ್ದೆವು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆದರೆ, ನಿನ್ನೆ(ಸೆ.28) ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್-19ರಿಂದ ಮೃತ ಪಟ್ಟರೆ ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಲಕ್ಷ ರೂಪಾಯಿಗಳನ್ನು, ಕೇಂದ್ರ ಸರಕಾರದಿಂದ 50 ಸಾವಿರ ರೂಪಾಯಿಗಳನ್ನು(ಬಿಪಿಎಲ್ ಅಲ್ಲದ ಕುಟುಂಬಗಳೂ ಸೇರಿದಂತೆ ಯಾರೆ ವ್ಯಕ್ತಿಯು ಕೋವಿಡ್‍ನಿಂದ ಮೃತಪಟ್ಟರೆ) ನೀಡುವುದಾಗಿ ಆದೇಶ ಹೊರಡಿಸಲಾಗಿದೆ ಎಂದು ಸಿದ್ದರಾಮಯ್ಯ ಕಿಡಿಗಾರಿದ್ದಾರೆ.

ಕೇಂದ್ರ, ರಾಜ್ಯ ಸರಕಾರಗಳೆರಡೂ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೆ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹವೆಸಗಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕೋವಿಡ್ ಬಿಕ್ಕಟ್ಟು ತುಟ್ಟತುದಿಯಲ್ಲಿದ್ದಾಗ ಸಮರ್ಪಕವಾದ ಚಿಕಿತ್ಸಾ ವ್ಯವಸ್ಥೆ ಮಾಡದೆ ಜನರು ಬೀದಿ ಬೀದಿಗಳಲ್ಲಿ ಮರಣ ಹೊಂದುವಂತಹ ಅರಾಜಕತೆಯನ್ನು ಸೃಷ್ಟಿಸಲಾಯಿತು. ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳಲಾಗುತ್ತಿದೆ. ಕೇಂದ್ರ, ರಾಜ್ಯ ಸರಕಾರಗಳ ಈ ನಿಲುವು ಮಾನವೀಯವೆನ್ನಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ, ಹಾಗಾಗಿ ಕೋವಿಡ್- 19 ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಕೃತಿ ವಿಕೋಪ ನಿಯಮಗಳಲ್ಲಿ, ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂದಿದೆ.  ರಾಜ್ಯ ಸರಕಾರ ಅದನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿ.ಪಿ.ಎಲ್ ಕಾರ್ಡು ಇದ್ದವರಿಗೆ ಮಾತ್ರ ಕೇವಲ 1.5 ಲಕ್ಷ ರೂ.(ಕೇಂದ್ರ, ರಾಜ್ಯಗಳೆರಡೂ ಸೇರಿ) ರೂಪಾಯಿಗಳನ್ನು ನೀಡಲಾಗುವುದೆಂದು ಹೇಳಲಾಗಿದೆ. ಇದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರಕಾರ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ನೀಡಲಾಗುವ ಪರಿಹಾರದ ನಿಯಮಗಳಂತೆ ಕೇಂದ್ರ ಸರಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ರಾಜ್ಯ ಸರಕಾರ ಕೇಂದ್ರವನ್ನು ಆಗ್ರಹಿಸಬೇಕು ಎಂದು ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X