ಚಾಮರಾಜನಗರ; ರೈಲು ಹಳಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಚಾಮರಾಜನಗರ: ನಗರದ ರೈಲು ನಿಲ್ದಾಣದ ಸಮೀಪದಲ್ಲಿ ಹಳಿಗೆ ಸಿಲುಕಿ ದೇಹದಿಂದ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದ ಕುಮಾರ್(28) ಮೃತ ಯುವಕ ಎಂದು ತಿಳಿದು ಬಂದಿದೆ.
ಬುಧವಾರ ಬೆಳಗ್ಗೆ ಮೈಸೂರು ಕಡೆಗೆ ಹೋಗುತ್ತಿದ್ದ ರೈಲಿಗೆ ಸಿಲುಕಿ ಕುಮಾರ್ ಮೃತಪಟ್ಟಿದ್ದಾನೆ. ರೈಲ್ವೆ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿ ಮೃತ ವ್ಯಕ್ತಿಯ ಬಳಿ ಇದ್ದ ಮೊಬೈಲ್ ಪತ್ತೆ ಹಚ್ಚಿ ಕುಟುಂಬದವರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಆಕಸ್ಮಿಕವಾಗಿ ರೈಲಿಗೆ ಸಿಲುಕಿರುವ ಬಗ್ಗೆ ಎನ್ನುವುದು ತಿಳಿದುಬರಲಿದೆ.
Next Story





