Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯಮಂತ್ರಿ ಬೊಮ್ಮಾಯಿ , ಸಚಿವ...

ಮುಖ್ಯಮಂತ್ರಿ ಬೊಮ್ಮಾಯಿ , ಸಚಿವ ಸೋಮಶೇಖರ್ ಗೆ ಧನ್ಯವಾದ ತಿಳಿಸಿದ ಎಸ್.ಎಂ.ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ29 Sept 2021 9:22 PM IST
share
ಮುಖ್ಯಮಂತ್ರಿ ಬೊಮ್ಮಾಯಿ , ಸಚಿವ ಸೋಮಶೇಖರ್ ಗೆ ಧನ್ಯವಾದ ತಿಳಿಸಿದ ಎಸ್.ಎಂ.ಕೃಷ್ಣ

ಬೆಂಗಳೂರು, ಸೆ.29: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಧನ್ಯವಾದ ತಿಳಿಸಿದ್ದಾರೆ.

ಯದುವಂಶದ ಮಹಾರಾಜರು ನಾಡಿನ ಸಾಂಸ್ಕøತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಥಮವಾಗಿ ವಿಜಯನಗರದ ಸಾಮ್ರಾಟ ಕೃಷ್ಣದೇವರಾಯರ ಕಾಲದಲ್ಲಿ ಪ್ರಾರಂಭಗೊಂಡ ದಸರಾ ಶ್ರೀ ರಾಜ ಒಡೆಯರ್‍ರವರ ಕಾಲದಲ್ಲಿ ಮೈಸೂರು ಸಾಮ್ರಾಜ್ಯಕ್ಕೆ ವಿಸ್ತರಿಸಿ ಇಂದಿಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸುತ್ತಿದೆ. ರಾಜಪ್ರಭುತ್ವದ ನಂತರ ಬಂದ ಪ್ರಜಾ ಸರಕಾರಗಳು ದಸರಾ ಆಚರಣೆಗೆ ಕಿಂಚಿತ್ತೂ ಚ್ಯುತಿ ಬರದ ಹಾಗೆ ಆಚರಿಸುತ್ತ ಬಂದಿರುವುದು ನಾಡಿನ ಹಿರಿಮೆಯನ್ನು ಎತ್ತಿ ಹಿಡಿದಿದೆ ಎಂದು ಎಸ್.ಎಂ.ಕೃಷ್ಣ ಹೇಳಿದ್ದಾರೆ.

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ ದೂರದೃಷ್ಟಿಯಿಂದ ಪ್ರತಿಷ್ಠಾಪನೆಗೊಂಡ ರೈತಾಪಿ ವರ್ಗವೆ ಆರ್ಥಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೋನ ಮಹಾ ಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸಿದ್ದು, ದಸರಾ ಉದ್ಘಾಟನೆಗೆ ಅವಕಾಶ ನೀಡಿದ್ದಕ್ಕೆ ಮುಖ್ಯಮಂತ್ರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಎಸ್.ಟಿ. ಸೋಮಶೇಖರ್ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆ ಭಾಗದ ಜನರ ಜೊತೆ ಬೆರೆತು ಕಳೆದ ಒಂದೂವರೆ ವರ್ಷದಲ್ಲಿ ಹಲವು ಜನಪರ ಕೆಲಸಗಳ ಮೂಲಕ ಮನೆಮಾತಾಗಿದ್ದಾರೆ. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರ ನೋವಿಗೆ ಸ್ಪಂದಿಸುವ ಜೊತೆಗೆ 127 ವರ್ಷದ ಮೈಸೂರು ಮೃಗಾಲಯದಲ್ಲಿ 1400ಕ್ಕೂ ಹೆಚ್ಚು ಪ್ರಾಣಿಗಳಿದ್ದು ಇವುಗಳ ಆಹಾರಕ್ಕಾಗಿ ತಾವು ಮತ್ತು ದಾನಿಗಳಿಂದ 3 ಕೋಟಿ 75 ಲಕ್ಷ ರೂ. ಸಂಗ್ರಹಿಸಿ ನೀಡಿರುವುದನ್ನು ಗಮನಿಸಿದ್ದೇನೆ. ಪ್ರಾಣಿಗಳ ರಕ್ಷಣೆ ವಿಷಯದಲ್ಲಿ ತಾವು ತೋರಿದ ಬದ್ಧತೆ ಇತಿಹಾಸದಲ್ಲಿ ದಾಖಲಾಗಿದೆ ಎಂದು ಎಸ್.ಎಂ.ಕೃಷ್ಣ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಕೊರೋನ ವೈದ್ಯಕೀಯ ಪರಿಹಾರ ನಿಧಿಗೆ ಅತಿಹೆಚ್ಚು ದೇಣಿಗೆಯನ್ನು ಸಹಕಾರ ಸಂಘ ಸಂಸ್ಥೆಗಳಿಂದ(ಸುಮಾರು 65 ಕೋಟಿ ರೂ.) ಸಂಗ್ರಹಿಸಿ ನೀಡಿರುವುದು ದಾಖಲೆಯಾಗಿ ಉಳಿದಿರುವುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸಂದರ್ಭದಲ್ಲಿ ಇತಿಹಾಸ ಪ್ರಸಿದ್ಧ ನಾಡ ದಸರಾಗೆ ನನ್ನನ್ನು ಆಹ್ವಾನಿಸಿರುವ ತಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿಯಾಗಿದ್ದೇನೆ. ನಾಡಿದ ದಸರಾ ಯಶಸ್ವಿಯಾಗಿ ಜರುಗಿ ಜನರ ಸಂಕಷ್ಟಗಳು ದೂರವಾಗಿ ಸಾಂಸ್ಕೃತಿಕ ಜಾತ್ರೆ ಯಶಸ್ಸು ಕಾಣಲು ತಾಯಿ ಚಾಮುಂಡೇಶ್ವರಿ ತಮಗೆ ಶಕ್ತಿ ನೀಡಲಿ ಎಂದು ಸೋಮಶೇಖರ್ ಕಾರ್ಯವೈಖರಿಗೆ ಎಸ್.ಎಂ.ಕೃಷ್ಣ ಪತ್ರದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X