Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಲಿಬಾನ್ ಸಂಸ್ಕೃತಿಯ ಸಿದ್ದರಾಮಯ್ಯ: ...

ತಾಲಿಬಾನ್ ಸಂಸ್ಕೃತಿಯ ಸಿದ್ದರಾಮಯ್ಯ: ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ29 Sept 2021 9:30 PM IST
share
ತಾಲಿಬಾನ್ ಸಂಸ್ಕೃತಿಯ  ಸಿದ್ದರಾಮಯ್ಯ:  ನಳಿನ್ ಕುಮಾರ್ ಕಟೀಲ್

ಬೆಂಗಳೂರು, ಸೆ. 29: ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲಿಬಾನ್ ಸಂಸ್ಕøತಿಯನ್ನು ಹೊಂದಿದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 24ಕ್ಕೂ ಅಧಿಕ ಸಂಘ ಪರಿವಾರದವರ ಹತ್ಯೆಯಾಗಿದ್ದು, ಕಾಂಗ್ರೆಸ್ ಆಡಳಿತದಲ್ಲೇ ರಾಜ್ಯದಲ್ಲಿ ಅತಿಹೆಚ್ಚು ಕೊಲೆ, ಸುಲಿಗೆ, ಹತ್ಯಾಕಾಂಡ ಮತ್ತು ಗೋಹತ್ಯೆ ನಡೆಯುತ್ತಿತ್ತು ಎಂದು ಅವರು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕೇವಲ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಶರತ್ ಮಡಿವಾಳ, ದೀಪಕ್ ರಾವ್ ಸೇರಿ ಹಲವು ಮುಖಂಡರ ಮತ್ತು ಕಾರ್ಯಕರ್ತರ ಹತ್ಯೆ ಮಾಡಲಾಗಿತ್ತು. ಸುಳ್ಯದಲ್ಲಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಕೊಲ್ಲಲಾಗಿತ್ತು. ಎಟಿಎಂ ಒಳಗೆ ಹೋಗಿದ್ದ ಮಹಿಳೆಯ ಮೇಲೆ ಬರ್ಬರ ಹಲ್ಲೆಯೂ ನಡೆದಿತ್ತು ಎಂದು ಕಟೀಲ್ ಟೀಕಿಸಿದ್ದಾರೆ.

ಈ ಎಲ್ಲ ದುರ್ಘಟನೆಗಳು ಸಿದ್ದರಾಮಯ್ಯ ಅವರ ಆಡಳಿತದಲ್ಲಿ ತಾಲಿಬಾನ್ ಸಂಸ್ಕøತಿ ಇತ್ತು ಎಂಬುದಕ್ಕೆ ಸ್ಪಷ್ಟ ಉದಾಹರಣೆಗಳು.ಅಫಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ತಾಲಿಬಾನ್ ಸರಕಾರ ಹುಟ್ಟು ಹಾಕಿದ್ದು ‘ಇಂದಿರಾ ಗಾಂಧಿ’, 1975ರಲ್ಲಿ ತುರ್ತು ಪರಿಸ್ಥಿತಿ ಹೇರಿ, ದೇಶಭಕ್ತರು, ಮಾಧ್ಯಮದ ಪ್ರತಿನಿಧಿಗಳನ್ನೂ ಜೈಲಿಗಟ್ಟುವ ಮೂಲಕ 18 ತಿಂಗಳುಗಳ ಕಾಲ ತಾಲಿಬಾನ್ ಆಡಳಿತ ನಡೆಸಿದ ಪಕ್ಷ ಕಾಂಗ್ರೆಸ್. ದೇಶದಲ್ಲಿ ತಾಲಿಬಾನ್ ಹುಟ್ಟಿಗೆ ಕಾರಣವೇ ಕಾಂಗ್ರೆಸ್. ಸಿದ್ದರಾಮಯ್ಯ ತಾವು ಆಗ ಕಾಂಗ್ರೆಸ್‍ನಲ್ಲಿ ಇರಲಿಲ್ಲ ಎಂಬ ಒಂದೇ ಕಾರಣಕ್ಕೆ ಈ ವಿಚಾರದಲ್ಲಿ ಜಾಣ ಮರೆವನ್ನು ಪ್ರದರ್ಶಿಸಿದ್ದಿರಾ? ಎಂದು ಕೇಳಿದ್ದಾರೆ.

2019-20ರ ವಿಧಾನಸಭಾ ಉಪ ಚುನಾವಣೆಗಳಲ್ಲಿನ ಸತತ ಸೋಲು, 2020ರಲ್ಲಿ ವಿಧಾನಪರಿಷತ್ ಚುನಾವಣೆಯಲ್ಲೂ ಸೋಲು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆದ ಹಿನ್ನಡೆಯಿಂದ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಅದೇ ಕಾರಣಕ್ಕೆ ಅವರು ಕ್ಷಣಕ್ಕೊಂದು ಮಾತಾಡುತ್ತಿದ್ದಾರೆ. ಮತ್ತೆ ಮತ್ತೆ ಸೋಲು-ಭಯ ಅವರನ್ನು ಕಾಡುತ್ತಿರುವಂತಿದೆ ಎಂದು ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಟಿಪ್ಪು ಜಯಂತಿಗೆ ಚಾಲನೆ ಕೊಟ್ಟದ್ದು ಮುಸ್ಲಿಂ ತುಷ್ಟೀಕರಣದ ಅವರ ಚಿಂತನೆಗೆ ಸ್ಪಷ್ಟ ಉದಾಹರಣೆ ಅಲ್ಲವೇ? ಮುಸ್ಲಿಂ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಅವರ ಉದ್ದೇಶ ಇದರ ಹಿಂದಿಲ್ಲವೇ? ಸಂಘ ಪರಿವಾರದವರಿಗೆ ನೋವಾದರೂ ತೊಂದರೆ ಇಲ್ಲ ಎಂಬ ಅವರ ಚಿಂತನೆಗೆ ಇದು ಕೈಗನ್ನಡಿ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಒಳಜಗಳವು ಮುಂದುವರಿದಿದೆ. ‘ಎತ್ತು ಏರಿಗೆ ಕೋಣ ನೀರಿಗೆ' ಎಂಬ ರೀತಿಯಲ್ಲಿ ಡಿಕೆಶಿ-ಸಿದ್ದರಾಮಯ್ಯ ನಡುವಿನ ಕಿತ್ತಾಟ ಮುಂದುವರಿದಿದೆ. ‘ಕೂಸು ಹುಟ್ಟುವ ಮೊದಲೇ ಕುಲಾವಿ' ಹೊಲಿಸುವ ಮಾದರಿಯಲ್ಲಿ ವಿಧಾನಸಭಾ ಚುನಾವಣೆ ಸಾಕಷ್ಟು ದೂರ ಇರುವಾಗಲೇ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಹಲವು ನಾಯಕರು ಕಾಂಗ್ರೆಸ್ ಗೆದ್ದರೆ ಸಿಎಂ ಅಭ್ಯರ್ಥಿ ಯಾರು ಎಂಬ ಅಂಶದ ಚರ್ಚೆಗೆ ಮುಂದಾಗಿದ್ದಾರೆ. ಇದು ಹತಾಶೆಯ ಪ್ರತೀಕವಲ್ಲದೆ ಮತ್ತೇನು ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X