Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ನಾಗರಿಕರ ಕ್ರೀಡಾ ಪ್ರವೃತ್ತಿ ಯುವ...

ಹಿರಿಯ ನಾಗರಿಕರ ಕ್ರೀಡಾ ಪ್ರವೃತ್ತಿ ಯುವ ಜನತೆಗೆ ಸ್ಪೂರ್ತಿಯಾಗಬೇಕು : ಡಿಸಿ ಕೂರ್ಮಾ ರಾವ್

ವಾರ್ತಾಭಾರತಿವಾರ್ತಾಭಾರತಿ29 Sept 2021 10:06 PM IST
share
ಹಿರಿಯ ನಾಗರಿಕರ ಕ್ರೀಡಾ ಪ್ರವೃತ್ತಿ ಯುವ ಜನತೆಗೆ ಸ್ಪೂರ್ತಿಯಾಗಬೇಕು : ಡಿಸಿ ಕೂರ್ಮಾ ರಾವ್

ಉಡುಪಿ, ಸೆ.29: ಹಿರಿಯ ನಾಗರಿಕರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು, ವಯೋಮಾನಕ್ಕೆ ತಕ್ಕ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಯುವಕರಿಗೆ ಸ್ಪೂರ್ತಿಯಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಹೇಳಿದ್ದಾರೆ.

ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಿಗೆ ವಿಕೆಟ್‌ಗೆ ರಿಂಗ್ ಹಾಕುವ ಮೂಲಕ ಚಾಲನೆ ನೀಡಿದರು.

ಕ್ರೀಡೆಯಲ್ಲಿ ಭಾಗವಹಿಸಲು ವಯಸ್ಸಿನ ಯಾವುದೇ ನಿರ್ಭಂಧವಿಲ್ಲ. ಕ್ರಿಯಾಶೀಲ ಮನಸ್ಸು ಮತ್ತು ಆರೋಗ್ಯಯುತ ದೇಹವನ್ನು ಉತ್ತಮವಾಗಿ ರಿಸಿಕೊಳ್ಳಲು ಹಿರಿಯ ನಾಗರಿಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕೊರೋನಾ ಸಂಕಷ್ಟದ ಸಂದಿಗ್ಧತೆಯಲ್ಲಿ ಹಿರಿಯ ನಾಗರಿಕರು ಆರೋಗ್ಯದ ದೃಷ್ಟಿಯಿಂದ ಹೊರಗೆ ಬಾರದೇ ಸಂಕಷ್ಟದ ಪರಿಸ್ಥಿತಿಯನ್ನು ಅನುಭವಿಸ ಬೇಕಾಯಿತು. ಆದ್ದರಿಂದ ಈಗ ಅದೆಲ್ಲವನ್ನೂ ತೊಡೆದು ಮತ್ತೆ ಯುವ ಜನಾಂಗಕ್ಕೆ ಹೊಸ ಚೈತನ್ಯದ ಸಂದೇಶ ಸಾರುವಂತೆ ಕ್ರೀಡೆಯಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳಬೇಕು ಎಂದರು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಮಾತನಾಡಿ, ಸದೃಢ ದೇಹದಲ್ಲಿ ಸದೃಢ ಮನಸ್ಸನ್ನು ಹೊಂದಲು ಕ್ರೀಡಾ ಚಟುವಟಿಕೆಯನ್ನು ಅತ್ಯವಶ್ಯಕವಾಗಿ ಅಳಡಿಸಿಕೊಳ್ಳಬೇಕು. ಸೇವೆಯಿಂದ ನಿವೃತ್ತಿ ಹೊಂದಿದ ಹಾಗೂ ಇತರ ಹಿರಿಯ ನಾಗರಿಕರು ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಖುಷಿಯಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರೊಂದಿಗೆ ಕ್ರೀಡೆಗೆ ಹೊಸ ಮೆರಗು ನೀಡಬೇಕು ಎಂದರು.

ಕ್ರೀಡಾಕೂಟದಲ್ಲಿ 60ರಿಂದ 80 ವಯೋಮಾನದ ಹಿರಿಯ ನಾಗರಿಕರು (ಪುರುಷ ಮತ್ತು ಮಹಿಳೆಯರು) ಪ್ರತ್ಯೇಕವಾಗಿ ಕಾಲ್ನಡಿಗೆ, ವಿಕೆಟ್‌ಗೆ ರಿಂಗ್ ಹಾಕುವುದು, ಕೇರಂ, ಚಿತ್ರಕಲೆ, ಗಾಯನ ಹಾಗೂ ಏಕಪಾತ್ರಾಭಿನಯ ಮುಂತಾದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರತ್ನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಉಡುಪಿ ಹಿರಿಯ ನಾಗರಿಕ ಒಕ್ಕೂಟದ ಅಧ್ಯಕ್ಷ ಸಿ.ಎಸ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X