ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ

ಮಂಗಳೂರು, ಸೆ.29: ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಿನ್ನಿಗೋಳಿ ಮನ್ನಬೆಟ್ಟು ನಿವಾಸಿ ನೌಷಾದ್ (25) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಈತನ ವಿರುದ್ಧ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಈತ ಮೂರು ವರ್ಷಗಳ ಹಿಂದೆ ಸುರತ್ಕಲ್ ಸಮೀಪ ನಡೆದಿದ್ದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
Next Story





