ಮುಂಬೈ: 29 ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು

ಮುಂಬೈ: ಮಹಾರಾಷ್ಟ್ರದ ಮುಂಬೈನ ಸರಕಾರಿ ಸ್ವಾಮ್ಯದ ಕಿಂಗ್ ಎಡ್ವರ್ಡ್ ಮೆಮೋರಿಯಲ್ (ಕೆಇಎಂ) ಆಸ್ಪತ್ರೆಯ ಕನಿಷ್ಠ 29 ವಿದ್ಯಾರ್ಥಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ 27 ವಿದ್ಯಾರ್ಥಿಗಳಿಗೆ ರೋಗದ ವಿರುದ್ಧ ಸಂಪೂರ್ಣ ಲಸಿಕೆ ಹಾಕಲಾಗಿದೆ.
ಸೋಂಕಿತ ವಿದ್ಯಾರ್ಥಿಗಳಲ್ಲಿ 23 ಮಂದಿ ಎಂಬಿಬಿಎಸ್ ಎರಡನೇ ವರ್ಷದಲ್ಲಿದ್ದರೆ, ಆರು ವಿದ್ಯಾರ್ಥಿಗಳು ಮೊದಲ ವರ್ಷದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ನಗರದ ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇತರ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲು ತಿಳಿಸಲಾಗಿದೆ.
ಕಾಲೇಜಿನಿಂದ ಒಟ್ಟು 1,100 ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್ ಕಲಿಯುತ್ತಿದ್ದಾರೆ. ಪರೀಕ್ಷೆಗೆ ಒಳಪಟ್ಟ ಎಲ್ಲ 29 ವಿದ್ಯಾರ್ಥಿಗಳು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಕೆಇಎಂ ಆಸ್ಪತ್ರೆಯ ಡೀನ್ ಡಾ.ಹೇಮಂತ್ ದೇಶಮುಖ್ ತಿಳಿಸಿದ್ದಾರೆ.
Next Story