ಜಿಮ್ ಸಲಕರಣೆಗೆ ಅರ್ಜಿ ಆಹ್ವಾನ
ಮಂಗಳೂರು, ಸೆ.30: ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕ್ರೀಡಾಪಟುಗಳ ಸ್ವಯಂ ಉದ್ಯೋಗಕ್ಕಾಗಿ ಜಿಮ್ ಸ್ಥಾಪಿಸಿಕೊಳ್ಳಲು ಜಿಮ್ ಸಲಕರಣೆಗಳ ವಿತರಣೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅರ್ಜಿ ಕರೆಯಲಾಗಿದ್ದು, ಅ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ನಗರದ ಮಂಗಳಾ ಕ್ರೀಡಾಂಗಣ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ.: 0824-2451264 ನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





