ಬೆಳ್ತಂಗಡಿ; ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಸೆರೆ

ಬೆಳ್ತಂಗಡಿ : ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ಬು ಗರ್ಭಿಣಿಯಾಗಿಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ನಿವಾಸಿ ಯೋಗೀಶ ಎಂದು ತಿಳಿದುಬಂದಿದೆ. ಇವರಿಬ್ಬರು ಹತ್ತನೇ ತರಗತಿಯ ವಿಧ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ್ದರು ಎಂದು ಈ ಬಗ್ಗೆ ಆಕೆಯ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Next Story





