ಕಾಸರಗೋಡು: ಬಿಜೆಪಿ ಹಿರಿಯ ನಾಯಕ ಸುಂದರ ರಾವ್ ನಿಧನ

ಕಾಸರಗೋಡು : ಕಾಸರಗೋಡು ನಗರಸಭಾ ಮಾಜಿ ಉಪಾಧ್ಯಕ್ಷ , ಬಿಜೆಪಿ ಹಿರಿಯ ನಾಯಕ ಕೆ .ಸುಂದರ ರಾವ್ (88) ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ನ್ಯಾಯವಾದಿಯಾಗಿದ್ದ ಅವರು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎರಡು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದರು. ರಾಜಕೀಯ ಅಲ್ಲದೆ ಸಾಮಾಜಿಕ, ಸಾಂಸ್ಕೃತಿಕ ಸೇರಿದಂತೆ ವಿವಿಧ ವಲಯಗಳಲ್ಲಿ ಸಕ್ರಿಯರಾಗಿದ್ದರು.
ಸುಂದರ ರಾವ್ ಅವರು ಗಡಿನಾಡು ಕಾಸರಗೋಡು ಜಿಲ್ಲೆಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಕ್ಕು ಮತ್ತು ಸವಲತ್ತುಗಳಿಗಾಗಿ ಧ್ವನಿ ಎತ್ತಿದವರು, ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡವರು.
ಮೃತರು ಪತ್ನಿ, ನಾಲ್ವರು ಮಕ್ಕಳು ಹಾಗೂ ಅಪಾರ ಬಳಗವನ್ನು ಅಗಲಿದ್ದಾರೆ.
Next Story





