ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧ: ಸಚಿವ ಬೈರತಿ ಬಸವರಾಜ

ಬೈರತಿ ಬಸವರಾಜ
ಬೆಂಗಳೂರು, ಅ.1: ಬಿಬಿಎಂಪಿ ಚುನಾವಣೆಗೂ ಬಿಜೆಪಿ ಸಿದ್ಧವಿದೆ. ಚುನಾವಣೆ ಎದುರಿಸಲು ನಾವೆಲ್ಲರೂ ಸಿದ್ಧರಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.
ಶುಕ್ರವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯ ಕೆಲವು ವಾರ್ಡ್ಗಳು ಅತ್ಯಂತ ಹೆಚ್ಚು ಮತದಾರರನ್ನು ಹೊಂದಿವೆ. ಆದುದರಿಂದ, ಈ ವಾರ್ಡ್ಗಳ ವ್ಯಾಪ್ತಿಯ ಮರು ವಿಂಗಡಣೆ ಅನಿವಾರ್ಯವಾಗಿದೆ ಎಂದರು.
ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದ ಅವರು, ಇವೆರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Next Story





