ಅಪಾರ್ಟ್ಮೆಂಟ್ನ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.1: ಇಲ್ಲಿನ ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್ಮೆಂಟ್ನ 11ನೆ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಗಗನ್ ಎಂಬಾತ ಮೃತ ಬಾಲಕ ಎಂದು ತಿಳಿದುಬಂದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಗುರುವಾರ ಸಂಜೆ ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್ಮೆಂಟ್ನ ಬಾಲ್ಕನಿಯಲ್ಲಿ ಗಗನ್ ಆಟವಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





