ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕರ ಸಮಸ್ಯೆಗಳ ಬಗ್ಗೆ ಚರ್ಚೆ

ಉಡುಪಿ, ಅ.1: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಬರುವ ಟ್ಯಾಕ್ಸಿಗಳಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸು ವಂತೆ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷರಾಗಿರುವ ಶಾಸಕ ಕೆ.ರಘುಪತಿ ಭಟ್ ಸೋಮವಾರ ಮಂಗಳೂರು ವಿಮಾನ ನಿಲ್ದಾಣದ ಮುಖ್ಯ ಅಧಿಕಾರಿ ಅಶಿತೋಷ್ ಚಂದ್ರ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಪ್ರಯಾಣಿಕರನ್ನು ಕರೆದೊಯ್ಯಲು ಬರುವ ಟ್ಯಾಕ್ಸಿಗಳಿಗೆ ಪಾರ್ಕಿಂಗ್ ಶುಲ್ಕ ವನ್ನು ವಿಧಿಸಲಾಗುತ್ತಿದ್ದು, ವಿಮಾನ ಆಗಮಿಸುವ ಸಮಯದಲ್ಲಿ ವ್ಯತ್ಯಾಸವಾಗಿ ಪ್ರಯಾಣಿಕರು ಬರುವುದು ತಡವಾಗಿ 30 ನಿಮಿಷಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡಲ್ಲಿ ರೂ.150 ಪಾವತಿಸಬೇಕಾಗುತ್ತದೆ. ಇದರಿಂದ ಟ್ಯಾಕ್ಸಿಗಳಿಗೆ ಹೆಚ್ಚಿನ ಹೊರೆಯಾಗುತ್ತಿದೆ ಎಂದು ಶಾಸಕರು ತಿಳಿಸಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿ ಅಶಿತೋಷ್ ಚಂದ್ರ, ಈ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿ ಯೇಷನ್ ಅಧ್ಯಕ್ಷ ದಿನೇಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಪಿ.ಆನಂದ್, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಕೋಶಾಧಿಕಾರಿ ಪ್ರಕಾಶ್ ಅಡಿಗ, ಸದಸ್ಯರಾದ ಕೃಷ್ಣ ಪೂಜಾರಿ, ರತೀಶ್ ಶೆಟ್ಟಿ, ಶ್ರೀನಾಥ್ ಉಪಸ್ಥಿತರಿದ್ದರು.





