Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೃದ್ಧಾಶ್ರಮಗಳ ನಿರ್ವಹಣೆಗೆ ಸರಕಾರದ...

ವೃದ್ಧಾಶ್ರಮಗಳ ನಿರ್ವಹಣೆಗೆ ಸರಕಾರದ ಅನುದಾನ 15 ಲಕ್ಷ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 Oct 2021 7:06 PM IST
share
ವೃದ್ಧಾಶ್ರಮಗಳ ನಿರ್ವಹಣೆಗೆ ಸರಕಾರದ ಅನುದಾನ 15 ಲಕ್ಷ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಅ. 1: `ವೃದ್ಧಾಶ್ರಮಗಳ ನಿರ್ವಹಣೆಗೆ ಕೇಂದ್ರ ಸರಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು, ಈ ಯೋಜನೆಗೆ ರಾಜ್ಯ ಸರಕಾರದಿಂದ ನೀಡಲಾಗುತ್ತಿದ್ದ 8 ಲಕ್ಷ ರೂಪಾಯಿಗಳ ಅನುದಾನವನ್ನು 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಶುಕ್ರವಾರ ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮತ್ತು ಉದ್ಘಾಟಿಸಿ ಮಾತನಾಡಿದ ಅವರು, `ಸರಕಾರ ಬಹಳ ಸಂವೇದನಾಶೀಲವಾಗಿ ಹಿರಿಯರಿಗೆ ಸ್ಪಂದಿಸುತ್ತದೆ. ಅವರ ವೈಯಕ್ತಿಕ ಬದುಕಿಗೆ ಆತ್ಮಸ್ಥೈರ್ಯ, ಲವಲವಿಕೆ, ಜೀವಂತಿಕೆಯನ್ನು ತುಂಬುವ ಕೆಲಸ ಮಾಡಿ, ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಸರಕಾರ ನಿಮಗೆ ಆಶ್ರಯಗೋಲಾಗುತ್ತದೆ, ಆಧಾರವಾಗುತ್ತದೆ' ಎಂಬ ಭರವಸೆ ನೀಡಿದರು.

`ಹಿರಿತನ ಒಂದು ಸ್ಥಿತಿ. ವಯಸ್ಸು, ಅನುಭವ ಹಾಗೂ ನಡವಳಿಕೆಯಿಂದ ಹಿರಿತನ ತೀರ್ಮಾನವಾಗುತ್ತದೆ. ಮಾನಸಿಕವಾಗಿ ನಾವು ಗಟ್ಟಿ ಇದ್ದು, ಸಮಾಜಕ್ಕೆ ಕೊಡುಗೆ ನೀಡಬಹುದು ಎಂಬ ಮನಸ್ಥಿತಿ ಇದ್ದರೆ, ಹಿರಿತನವನ್ನು ಅರ್ಥಪೂರ್ಣವಾಗಿ ಕಳೆಯಬಹುದು. ಈ ಮನೋಸ್ಥಿತಿ ಪಡೆಯಲು ದೈಹಿಕ ಆರೋಗ್ಯ, ಕುಟುಂಬದ ವಾತಾವರಣ, ಸಮಾಜದ ಸಹಾಯ ಅಗತ್ಯ. ಹಿರಿಯರು ಸಂತೋಷವಾಗಿ, ಸುರಕ್ಷಿತವಾಗಿ ಹಾಗೂ ಆರೋಗ್ಯವಂತರಾಗಿ ಬದುಕಲು ಸಾಧ್ಯ. ಸರಕಾರ, ವ್ಯವಸ್ಥೆ, ಕುಟುಂಬ ಮತ್ತು ಸಮಾಜ ಎಂಬ ನಾಲ್ಕು ಕಂಬಗಳು ಹಿರಿಯ ಜೀವಿಗಳಿಗೆ ಆಶ್ರಯ ಕೊಡುತ್ತವೆ. ಈ ಕೆಲಸ ಇನ್ನಷ್ಟು ಪರಿಣಾಮಕಾರಿಯಾಗಿ ಆಗಬೇಕು ಎಂದು ಅವರು ತಿಳಿಸಿದರು.

ಸ್ಥಿತಪ್ರಜ್ಞರಾಗಿ ಬದುಕನ್ನು ಎದುರಿಸಿ: `ಹಿರಿಯರ ಬದುಕಿನಲ್ಲಿ ಹಾಸ್ಯ ಟಾನಿಕ್ ಇದ್ದಂತೆ. ನಮ್ಮ ಬದುಕಿನಲ್ಲಿ ಎಲ್ಲವನ್ನೂ ನಿಯಂತ್ರಣ ಮಾಡುತ್ತೇವೆ ಎನ್ನುವುದು ತಪ್ಪು. ಸ್ಥಿತಪ್ರಜ್ಞರಾಗಿ ಬದುಕನ್ನು ಎದುರಿಸಬೇಕಾಗುತ್ತದೆ ಎಂದ ಬಸವರಾಜ ಬೊಮ್ಮಾಯಿ, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಅಗತ್ಯ. ಮಾಡಿದ್ದನ್ನು ಸರಿಯಾಗಿ ಮಾಡಿದ್ದೇನೆ ಸಂತೃಪ್ತಿಯ ಭಾವ ಇರಬೇಕು. ಆತ್ಮಚೈತನ್ಯವನ್ನು ಸದಾಕಾಲ ಜೀವಂತವಾಗಿಡಬೇಕು. ಕರ್ನಾಟಕದಲ್ಲಿನ 54ಲಕ್ಷ ಹಿರಿಯರು ಸಂತೋಷದಿಂದಿರಬೇಕು ಎನ್ನುವುದು ನನ್ನ ಆಶಯ ಎಂದು ನುಡಿದರು.

ಹಿರಿಯರು ಅನುಭವದ ಭಂಡಾರ: `ಹಿರಿಯರು ಅನುಭವದ ಭಂಡಾರ, ಸಂಪತ್ತು ಇದ್ದಂತೆ. ಈ ಸಂಪತ್ತು ನಾಡು ಕಟ್ಟುವುದರಲ್ಲಿ, ಸಮಾಜ ಕಟ್ಟಲು, ಮೌಲ್ಯಗಳನ್ನು ಸಮಾಜದಲ್ಲಿ ಬಿತ್ತಲು ಹಿರಿಯರ ಅನುಭವ ಬಳಕೆಯಾಗಬೇಕು. ಯಾವ ಸಮಾಜದಲ್ಲಿ ಯುವಕರು ಹಿರಿಯರನ್ನು ಗೌರವಿಸಿ ಆಧಾರವಾಗುತ್ತಾರೋ, ಆಶ್ರಯಗೋಲಾಗುತ್ತಾರೋ ಆ ಸಮಾಜ ಅತ್ಯಂತ  ಧನ್ಯತಾಪೂರ್ಣ ಸಮಾಜವಾಗುತ್ತದೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು. ಮನೆಯಲ್ಲಿ ಹಿರಿಯರನ್ನು ಇಟ್ಟುಕೊಂಡು ಗೌರವಿಸುವುದು ಭಾರತೀಯರ ಸಂಸ್ಕøತಿ ಎಂದು ತಿಳಿಸಿದರು.  

ಈ ವೇಳೆ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿಯನ್ನು ಸಿಎಂ ಉದ್ಘಾಟಿಸಿ, ಹಿರಿಯ ನಾಗರಿಕರನ್ನು ಸನ್ಮಾನಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ಹಿರಿಯ ನಾಗರಿಕರ ಸಬಲಿಕರಣ ಸಚಿವ ಹಾಲಪ್ಪ ಆಚಾರ್, ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ ಉದಯ್ ಗರುಡಾಚಾರ್, ಪೂರ್ಣಿಮಾ ಶ್ರೀನಿವಾಸ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X