Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆಯ ಹಿರಿಯ ನಾಗರಿಕರನ್ನು...

ಮನೆಯ ಹಿರಿಯ ನಾಗರಿಕರನ್ನು ನಿರ್ಲಕ್ಷಿಸಬೇಡಿ: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ1 Oct 2021 8:33 PM IST
share
ಮನೆಯ ಹಿರಿಯ ನಾಗರಿಕರನ್ನು ನಿರ್ಲಕ್ಷಿಸಬೇಡಿ: ರಘುಪತಿ ಭಟ್

ಉಡುಪಿ, ಅ.1: ಕುಟುಂಬದಲ್ಲಿ ಹಾಗೂ ಸಮಾಜದಲ್ಲಿರುವ ಹಿರಿಯ ನಾಗರಿಕರನ್ನು ನಿರ್ಲಕ್ಷಿಸದೇ, ಅವರನ್ನು ಗೌರವದಿಂದ ನೋಡಿಕೊಳ್ಳುವ ವಾತಾವರಣವನ್ನು ಸೃಷ್ಟಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಶುಕ್ರವಾರ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಸ್ಪತ್ರೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ ಉಡುಪಿ, ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ಹಿರಿಯ ನಾಗರಿಕರು ಜೀವನದಲ್ಲಿ ಸಾಕಷ್ಟು ಸಂಕಷ್ಠ ಮತ್ತು ಸಂಘರ್ಷಗಳನ್ನು ಎದುರಿಸಿ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಕೊಡುಗೆ ನೀಡಿರುತ್ತಾರೆ. ಅವರನ್ನು ಗೌರವದಿಂದ ಕಾಣುವುದು ಅತ್ಯಂತ ಅಗತ್ಯ. ಹಿರಿಯ ನಾಗರಿಕರಿಗೆ ಗೌರವ ನೀಡದವರಿಗೆ, ಸಮಾಜವೂ ಗೌರವ ನೀಡುವುದಿಲ್ಲ ಎಂಬ ವಾತಾವರಣವನ್ನು ನಿರ್ಮಿಸಬೇಕಿದೆ. ಅವರಿಗೆ ಸಹಾಯಕ್ಕಿಂತ ಹೆಚ್ಚು ಪ್ರೀತಿ ತೋರಿಸಬೇಕಿದೆ ಎಂದು ರಘುಪತಿ ಭಟ್ ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಮಾತನಾಡಿ, ಹಿರಿಯ ನಾಗರಿಕರಿಗೆ ವಯಸ್ಸು ಎಂಬುದು ಒಂದು ಸಂಖ್ಯೆ ಮಾತ್ರ, ಮನಸ್ಸಿಗೆ ವಯಸ್ಸು ಸಮಸ್ಯೆ ಯಾಗುವುದಿಲ್ಲ. ಕುಟುಂಬ ಮತ್ತು ಸಮಾಜ ಹಿರಿಯರಿಗೆ ಆತ್ಮಾಭಿಮಾನ ಮತ್ತು ಗೌರವ ದೊರೆಯುವಂತೆ ನೋಡಿಕೊಳ್ಳಬೇಕು. ಉಡುಪಿಯಲ್ಲಿ ಹಿರಿಯ ನಾಗರಿಕರಿಗೆ ‘ಡೇ-ಕೇರ್ ಸೆಂಟರ್’ ಆರಂಭಿಸುವ ಬಗ್ಗೆ ಪ್ರಯತ್ನಿಸಲಾಗುವುದು. ಕೇಂದ್ರ ಸರ್ಕಾರದ ಡಿಜಿಟಲ್ ಪ್ಲಾಟ್ ಫಾರಂ ಮತ್ತು ಪೋರ್ಟಲ್‌ನಲ್ಲಿ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಹಿರಿಯ ನಾಗರಿಕರಿಗೆ ಕಾನೂನಾತ್ಮಕವಾಗಿ ಇರುವ ರಕ್ಷಣೆ ಹಾಗೂ ಸರಕಾರದ ವಿವಿಧ ಯೋಜನೆ ಮತ್ತು ಸವಲತ್ತುಗಳ ಬಗ್ಗೆ ಅರಿವು ಮೂಡಿಸ ಬೇಕು. ಹಿರಿಯರು ಸಮಾಜದ ಸಂಪನ್ಮೂಲ ವ್ಯಕ್ತಿಗಳು ಎಂದರು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ನಡೆದ ಸ್ಪರ್ದೆಗಳಲ್ಲಿ ವಿಜೇತ ರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಉಡುಪಿ ಜಿಲ್ಲಾಸ್ಪತ್ರೆ ವತಿ ಯಿಂದ ಹಿರಿಯ ನಾಗರಿಕರಿಗೆ ಕಣ್ಣಿನ ಪರೀಕ್ಷೆ, ಮಧುಮೇಹ, ರಕ್ತದೊತ್ತಡ, ಟಿಬಿ ಪರೀಕ್ಷಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ. ರಾಘವೇಂದ್ರ ಕಿಣಿ, ವಕೀಲ ಸಂಘದ ಅಧ್ಯಕ್ಷ ಬಿ.ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಆರ್, ವಿಕಲಚೇತನರ ಸಬಲೀಕರಣ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರತ್ನ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಿವೈಎಸ್ಪಿ ಸುಧಾಕರ್ ನಾಯಕ್ ಹಾಗೂ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.

ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಸಿ.ಎಸ್.ರಾವ್ ಸ್ವಾಗತಿಸಿ, ರೂಪಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X