ಉಡುಪಿ: ಅ.2ರಂದು ಕೋವಿಡ್ ಲಸಿಕೆ ಲಭ್ಯತೆ ವಿವರ
ಉಡುಪಿ, ಅ.1: ಉಡುಪಿ ಜಿಲ್ಲೆಯಲ್ಲಿ ಗಾಂಧಿ ಜಯಂತಿ ದಿನದಂದು 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯವಿರಲಿದೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಉಡುಪಿ ನಗರ ಪ್ರದೇಶದ ಸಿಟಿ ಬಸ್ ನಿಲ್ದಾಣದಲ್ಲಿ ನಾಳೆ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ 200 ಲಭ್ಯವಿರುತ್ತದೆ. ಅದೇ ರೀತಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ 150 ಲಭ್ಯವಿದೆ.
ಇನ್ನು ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯಬಹುದು.
ಅ.30ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಪಡೆದು 28 ದಿನಗಳಾದವರಿಗೆ 2ನೇ ಡೋಸ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೀಡಲಾಗುತ್ತದೆ ಎಂದು ಡಾ.ಉಡುಪ ತಿಳಿಸಿದ್ದಾರೆ.





