ಅ.2: ಗಾಂಧಿ ಜಯಂತಿ ಅಂಗವಾಗಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ
ಮಂಗಳೂರು, ಅ.1: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾಡಳಿತ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಬ್ರಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯು ಅ.2ರಂದು ಬೆಳಗ್ಗೆ 9:30ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಲಿರುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಜಿಪಂ ಸಿಇಒ ಡಾ.ಕುಮಾರ, ಉಪ ಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್‌ನ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ, ರೋಹನ್ ಕಾರ್ಪೊರೇಷನ್‌ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಭಾಗವಹಿಸಲಿರುವರು. ಪಂದ್ಯಾವಳಿಯಲ್ಲಿ ಜಿಲ್ಲಾಧಿಕಾರಿ ತಂಡ, ಪೊಲೀಸ್ ಆಯುಕ್ತರ ತಂಡ, ಎಸ್ಪಿ ಇಲೆವೆನ್, ಕುಲಪತಿ ತಂಡ, ಸಹ್ಯಾದ್ರಿ, ಪತ್ರಕರ್ತರ ನಗರ ಮತ್ತು ಗ್ರಾಮೀಣ ತಂಡಗಳು ಭಾಗವಹಿಸಲಿವೆ.
ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಬಹುಮಾನ ವಿತರಿಸಲಿಸಲಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ, ಕೆಯುಡಬ್ಲುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸಲಿರುವರು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







