ಉಡುಪಿ: ಹಿರಿಯ ಸಾರಿಗೆ ಉದ್ಯಮಿ ರಬೀಂದ್ರ ನಾಯಕ್ ನಿಧನ

ಉಡುಪಿ, ಅ.2: ಸಾರಿಗೆ ಉದ್ಯಮಿ ಹಾಗೂ ಸಮಾಜ ಸೇವಕರಾಗಿದ್ದ ಪಾಂಗಾಳ ರಬೀಂದ್ರ ನಾಯಕ್ (99) ಇಂದು ಮುಂಜಾನೆ ನಿಧನರಾಗಿದ್ದಾರೆ.
ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಜಿಲ್ಲೆಯ ಪ್ರಥಮ ಸಾರಿಗೆ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಅವರು, ಕರಾವಳಿ ಭಾಗದಲ್ಲಿ ಗಜಾನನ ಹಾಗೂ ಹುನುಮಾನ್ ಟ್ರಾನ್ಸ್ ಪೋರ್ಟ್ ಸಂಸ್ಥೆಯನ್ನು ಪ್ರಾರಂಭಿಸಿ ಕರಾವಳಿಯ ಸಾರಿಗೆ ಉದ್ಯಮಕ್ಕೆ ಹೊಸ ದಿಕ್ಕು ತೋರಿದ್ದರು. ಹತ್ತು ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅವರು, ಉಡುಪಿ ಜಿಲ್ಲಾಸ್ಪತ್ರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾಸ್ಪತ್ರೆಯ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದರು. ಉಡುಪಿಯ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Next Story





