ಅ.3: ವಿಂಟೇಜ್ ಕಾರು, ಸೈಕಲ್ ರ್ಯಾಲಿ
ಮಂಗಳೂರು, ಅ.2:ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗೆ ಸಂಬಂಧಿಸಿ ಅ.3ರಂದು ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 8 ಗಂಟೆಯಿಂದ ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ವಿಂಟೇಜ್ ಕಾರ್ ರ್ಯಾಲಿ, ಸೆಕಲ್ ರ್ಯಾಲಿ, ವಾಕಾಥಾನ್ ನಡೆಯಲಿದೆ.
ಈ ರ್ಯಾಲಿಯು ಎ.ಬಿ. ಶೆಟ್ಟಿ ವೃತ್ತದಿಂದ ಕ್ಲಾಕ್ ಟವರ್, ಹಂಪನಕಟ್ಟೆ ಜಂಕ್ಷನ್, ಅಂಬೇಡ್ಕರ್ ವೃತ್ತ, ಬಂಟ್ಸ್ ಹಾಸ್ಟೆಲ್, ಪಿ.ವಿ.ಎಸ್ ವೃತ್ತ, ಬಲ್ಲಾಳ್ ಬಾಗ್, ಲಾಲ್‌ಬಾಗ್ ವೃತ್ತ, ಲೇಡಿಹಿಲ್ ವೃತ್ತ, ಮಂಗಳಾ ಕ್ರೀಡಾಂಗಣದವರೆಗೆ ಸಾಗಲಿದೆ.
ದಾರಿಯುದ್ದಕ್ಕೂ ಜಂಕ್ಷನ್‌ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಂಗಳ ಕ್ರೀಡಾಂಗಣದಲ್ಲಿ ಚಿತ್ರಕಲಾ ಸ್ಪರ್ಧೆ, ಚಿತ್ರಕಲಾ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಚಿವ ಎಸ್. ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ಮನಪಾ ಆಯುಕ್ತ ಆಕ್ಷಯ್ ಶ್ರೀಧರ್, ಕಿಯೋನಿಸ್ಕ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಉಪ ಮೇಯರ್ ಸುಮಂಗಳಾ ರಾವ್ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.







