ಕ್ರೇನ್ ಢಿಕ್ಕಿ: ಪಾದಚಾರಿ ಮೃತ್ಯು
ಕುಂದಾಪುರ, ಅ.2: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.1ರಂದು ಸಂಜೆ 6.45ರ ಸುಮಾರಿಗೆ ಬಳ್ಕೂರು ಗ್ರಾಮದ ರಾಮ ಮೊಗವೀರ ಎಂಬವರ ಮನೆಯ ಬಳಿ ನಡೆದಿದೆ.
ಬಸ್ರೂರು ಕಡೆಯಿಂದ ಕಂಡ್ಲೂರು ಕಡೆಗೆ ಹೋಗುತ್ತಿದ್ದ ಕ್ರೇನ್, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸುಬ್ರಾಯ ಆಚಾರ್ಯ ಎಂಬವರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





