Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಕ್ತಿ ವಿದ್ಯಾ ಸಂಸ್ಥೆ: ಮಹಾತ್ಮ...

ಶಕ್ತಿ ವಿದ್ಯಾ ಸಂಸ್ಥೆ: ಮಹಾತ್ಮ ಗಾಂಧಿ-ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ2 Oct 2021 10:38 PM IST
share
ಶಕ್ತಿ ವಿದ್ಯಾ ಸಂಸ್ಥೆ: ಮಹಾತ್ಮ ಗಾಂಧಿ-ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮಂಗಳೂರು, ಅ.2: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಆಗಮಿಸಿದ್ದ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆಯ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ್ ಎಂ.ಕೆ. ಮಾತನಾಡಿ, ಮಹಾತ್ಮ ಗಾಂಧಿಯವರು ನಡೆ, ನುಡಿ ಹಾಗೂ ಸತ್ಯತೆಯಿಂದ ರಾಷ್ಟ್ರಪಿತ ಸ್ಥಾನವನ್ನು ಪಡೆದರು. ದೇಶದಲ್ಲಿದ್ದ ಬಡತನಕ್ಕೋಸ್ಕರ ತಾನು ಐಶಾರಾಮಿ ಜೀವನ ನಡೆಸದೆ ಜನರ ಮಧ್ಯೆ ಇದ್ದು ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ದೇಶಕ್ಕೋಸ್ಕರ ಸ್ವಾತಂತ್ರ ಹೋರಾಟವನ್ನು ಮಾಡಿದರು ಎಂದರು.

ಗಾಂಧೀಜಿಯವರ ಸ್ವಾವಲಂಬಿ ಜೀವನ ಇಂದಿನ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಕಷ್ಟಪಟ್ಟು, ಇಷ್ಟಪಟ್ಟು ಓದಬೇಕು. ಯಾರೂ ಒತ್ತಡ ಹಾಕಿ ಓದಿಸಬಾರದು. ಸ್ವಾಲಂಬಿಯಾಗಿದ್ದಲ್ಲಿ ಜೀವನದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಿದೆ ಎಂದು ಅವರು ಹೇಳಿದರು. ಲಾಲ್ ಬಹದ್ದೂರ್ ಶಾಸ್ತ್ರಿಯವರ ಪ್ರಾಮಾಣಿಕತೆಯ ಜೀವನವನ್ನು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ವಿವರಿಸಿದರು. ದೇಶದ ಸೈನಿಕರು ಮತ್ತು ರೈತರಿಗೆ ಸಮಾನವಾದ ಗೌರವವನ್ನು ಶಾಸ್ತ್ರಿಯವರು ನೀಡಿದರು ಎಂಬುದನ್ನು ನೆನಪಿಸಿದರು. ಅವರು ಪ್ರಧಾನಿಯಾಗಿದ್ದ ದೇಶವು ಪ್ರಗತಿಯತ್ತ ಮುನ್ನಡೆಯುವಂತೆ ಅವರು ಮಾಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾಗಲು ವಿದ್ಯಾರ್ಥಿಗಳು ಅವರ ಪ್ರಾಮಾಣಿಕತೆಯ ದಾರಿಯಲ್ಲಿ ನಡೆದು ದೇಶದ ಋಣ ತೀರಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ದೇಶದ ಅಭಿವೃದ್ಧಿಗೆ ನಾವೆಲ್ಲರೂ ಈ ಮಹಾನೀಯರ ಜಯಂತಿಯ ದಿನದಂದು ಪಣ ತೊಡಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಸಂಸ್ಥೆಯ ಪ್ರಧಾನ ಸಲಹೆಗಾರರ ಮೇಶಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್‌ರೈ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು.

ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ. ರಾಜಾರಾಮ್ ರಾವ್ ಸ್ವಾಗತಿಸಿದರು. ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ವಿದ್ಯಾ ಜಿ. ಕಾಮತ್ ವಂದಿಸಿದರು. ಅಧ್ಯಾಪಕಿ ದೀಪ್ತಿ ನಿರೂಪಿಸಿದರು. ಕನ್ನಡ ಅಧ್ಯಾಪಕ ಶರಣಪ್ಪ ಅತಿಥಿಗಳನ್ನು ಪರಿಚಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X