Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೇಹ್ ನಲ್ಲಿ ಜಗತ್ತಿನ ಅತಿ ದೊಡ್ಡ...

ಲೇಹ್ ನಲ್ಲಿ ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜದ ಅನಾವರಣ

225 ಅಡಿ ಉದ್ದ, 150 ಅಡಿ ಅಗಲ, 1 ಸಾವಿರ ಕೆ.ಜಿ. ಭಾರದ ತಿರಂಗಾ

ವಾರ್ತಾಭಾರತಿವಾರ್ತಾಭಾರತಿ2 Oct 2021 10:58 PM IST
share
ಲೇಹ್ ನಲ್ಲಿ ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜದ ಅನಾವರಣ

ಹೊಸದಿಲ್ಲಿ, ಸೆ.21: ಖಾದಿ ಬಟ್ಟೆಯಲ್ಲಿ ರಚಿಸಲಾದ ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಮಹಾತ್ಮಾಗಾಂಧೀಜಿಯವರ 152ನೇ ಜನ್ಮದಿನವಾದ ಶನಿವಾರ ಲಡಾಕ್ನ ಲೇಹ್ನಲ್ಲಿ ಅನಾವರಣಗೊಳಿಸಲಾಯಿತು. ಲಡಾಕ್ ನ ಲೆಫ್ಟಿನೆಂಟ್ ಗವರ್ನರ್ ಆರ್.ಕೆ. ಮಾಥುರ್ ನೂತನ ರಾಷ್ಟಧ್ವಜವನ್ನು ಅರಳಿಸಿದರು.

225 ಅಡಿ ಉದ್ದ ಹಾಗೂ 150 ಅಡಿ ಅಗಲದ ಈ ತ್ರಿವರ್ಣ ಧ್ವಜವು 1 ಸಾವಿರ ಕೆ.ಜಿ. ಭಾರವಿದೆ. ಭಾರತೀಯ ಸೇನೆಯ 57 ಎಂಜಿನಿಯರ್ ರೆಜಿಮೆಂಟ್ ಈ ರಾಷ್ಟ್ರಧ್ವಜವನ್ನು ಸಿದ್ಧಪಡಿಸಿದೆ ಎಂದು ದೂರದರ್ಶನ ವರದಿ ತಿಳಿಸಿದೆ.

‘‘ನಮ್ಮ ಧ್ವಜವು ನಮ್ಮ ಏಕತೆ, ಮಾನವತೆ ಹಾಗೂ ದೇಶದ ಪ್ರತಿಯೊಬ್ಬರೂ ಸ್ವೀಕರಿಸುವಂತಹ ಸಂಕೇತವಾಗಿದೆ ಎಂದು ಮಹಾತ್ಮಾಗಾಂಧಿ ಹೇಳಿದ್ದರು. ಇದು ನಮ್ಮ ದೇಶದ ಮಹಾನತೆಯ ಸಂಕೇತವೂ ಆಗಿದೆ.. ಮುಂಬರುವ ವರ್ಷಗಳಲ್ಲಿ ಈ ಧ್ವಜವು ನಮ್ಮ ಸೈನಿಕರ ಉತ್ಸಾಹದ ಸಂಕೇತವಾಗಲಿದೆ’’ ಎಂದು ಲಡಾಕ್ ಗವರ್ನರ್ ರಾಷ್ಟ್ರಧ್ವಜವನ್ನು ಅರೋಹಣಗೊಳಿಸಿದ ಬಳಿಕ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ತಿಳಿಸಿದರು.

ಈ ಬಗ್ಗೆ ಕೇಂದ್ರ ಗೃಹ ಮನ್ಸುಖ್ ಮಾಂಡವೀಯ ಟ್ವಿಟ್ಟರ್ ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದಾರೆ. ‘‘ ಗಾಂಧೀಜಿ ಜಯಂತಿಯಂದು ಭಾರತದ ರಾಷ್ಟ್ರಧ್ವಜ ಲಡಾಕ್ನ ಲೇಹ್ನಲ್ಲಿ ಅನಾವರಣಗೊಂಡಿರುವುದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ. ಬಾಪೂಜಿಯವರ ನೆನಪನ್ನು ಸ್ಮರಿಸುವ, ಭಾರತೀಯ ಕರಕುಶಲಕರ್ಮಿಗಳನ್ನು ಉತ್ತೇಜಿಸುವ ಹಾಗೂ ದೇಶವನ್ನು ಗೌರವಿಸುವ ಈ ಸಂಕೇತವನ್ನು ನಾನು ಗೌರವಿಸುತ್ತೇನೆ. ಜೈ ಹಿಂದ್ ಜೈ ಭಾರತ್ ಎಂದವರು ಟ್ವೀಟಿಸಿದ್ದಾರೆ.

ಖಾದಿ ಹಾಗೂ ಗ್ರಾಮ ಕೈಗಾರಿಕೋದ್ಯಮ ಆಯೋಗ (ಕೆವಿಐಸಿ) ಈ ಧ್ವಜವನ್ನು ತಯಾರಿಸಿದ್ದು, ಅದನ್ನು ಲೇಹ್ನಲ್ಲಿರುವ ಭಾರತೀಯ ಸೇನಾಪಡೆ ಪ್ರದರ್ಶಿಸಿದೆ.

ಧ್ವಜದ ಉದ್ಘಾಟನಾ ಸಮಾರಂಭದಲ್ಲಿ ಲೇಹ್ಗೆ ಎರಡು ದಿನಗಳ ಭೇಟಿಗೆ ಆಗಮಿಸಿದ್ದ ಸೇನಾ ವರಿಷ್ಠ ಮುಕುಂದ ನರವಾಣೆ ಹಾಗೂ ಇತರ ಕೆಲವು ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಗಳು ಹಾರಾಟ ನಡೆಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದವು. ಭಾರತೀಯ ಸೇನೆಯ 57ನೇ ಎಂಜಿನಿಯರಿಂಗ್ ರೆಜಿಮೆಂಟ್ನ ಕನಿಷ್ಠ 150 ಸೈನಿಕರು ರಾಷ್ಟ್ರಧ್ವಜವನ್ನು ಹೊತ್ತೊಯ್ದು ಲೇಹ್ನ ನೆಲಮಟ್ಟದಿಂದ ಎರಡು ಸಾವಿರ ಅಡಿ ಎತ್ತರದ ಬೆಟ್ಟದಲ್ಲಿ ಸ್ಥಾಪಿಸಿದ್ದಾರೆ. ಬೆಟ್ಟದ ತುದಿಯನ್ನು ತಲುಪಲು ಸೈನಿಕರಿಗೆ ಎರಡು ತಾಸುಗಳ ಬೇಕಾದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X