Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ...

ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ3 Oct 2021 6:22 PM IST
share
ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ

ಮಂಗಳೂರು: ಮಾತೃಭಾಷೆ- ಸಂಸ್ಕೃತಿಯನ್ನು ಯಾರು ಪ್ರೀತಿ ಮಾಡುತ್ತಾರೋ ಅಂತಹವರು ಇನ್ನೊಂದು ಭಾಷೆ-ಜನಾಂಗವನ್ನು ಪ್ರೀತಿಸುತ್ತಾರೆ. ಇಂತಹ ಪ್ರೀತಿಯಿಂದಲೇ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯ ಬದುಕು ನಿರ್ಮಾಣಗೊಂಡಿದೆ ಎಂದು ರೆಡ್ ಕ್ರಾಸ್ ಸೊಸೈಟಿಯ ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮಾ ಹೇಳಿದರು. ಅವರು ಮಂಗಳೂರು ಶ್ರೀನಿವಾಸ ಹೋಟೆಲಿನಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್  ಏರ್ಪಡಿಸಿದ್ದ "ಬ್ಯಾರಿ ಬಾಸೆರೊ ನಾಲಾಚರಣೆ" ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಬ್ಯಾರಿ ಮುಂದಾಳು ಅಬ್ದುಲ್ ಖಾದರ್ ಕೊಣಾಜೆ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಜಿ.ಎಮ್. ಶಾಹುಲ್ ಹಮೀದ್  ಮೆಟ್ರೋ ಅಧ್ಯಕ್ಷತೆ ವಹಿಸಿದ್ದರು.                   

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ  ಬಿ.ಎ.ಮುಹಮ್ಮದ್ ಹನೀಫ್ ಮಾತನಾಡಿ ಸಾವಿರಾರು ವರ್ಷಗಳ ಇತಿಹಾಸವಿರುವ ಬ್ಯಾರಿ ಭಾಷೆಗೆ ಮಾನ್ಯತೆ ನೀಡಿ ಗಜೆಟ್ ಪ್ರಕಟಣೆಯ ಮೂಲಕ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು 2013 ರ ಅಕ್ಟೋಬರ್ 03 ರಂದು ಅಸ್ತಿತ್ವಕ್ಕೆ ಬಂದಿದೆ. ಆದುದರಿಂದ ಅಕ್ಟೋಬರ್ 3 ನ್ನು ಬ್ಯಾರಿ ಭಾಷಾ ದಿನಾಚರಣೆಯನ್ನಾಗಿ ಆಚರಿಸುತ್ತಾ ಬಂದಿದ್ದೇವೆ. ಇದನ್ನು ಮುಂದಿನ ದಿನಗಳಲ್ಲಿ ಸಾರ್ವತ್ರಿಕವಾಗಿ ಶಾಲೆ, ಮದ್ರಸ ಮತ್ತು ಹಳ್ಳಿ ಹಳ್ಳಿಗಳಲ್ಲಿ ಆಚರಿಸುವಂತಾಗಲು ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಸದಸ್ಯ ಅಬ್ದಲ್ ಲತೀಫ್ ಕಂದಕ, ಬ್ಯಾರಿ ವಾರ್ತೆಯ ಸಂಪಾದಕ ಬಶೀರ್ ಬೈಂಕಪಾಡಿ, ಮೀಫ್ ಅಧ್ಯಕ್ಷರಾದ ಮೂಸಬ್ಬ ಪಿ.ಬ್ಯಾರಿ, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಬಂಟ್ವಾಳ ಪುರಸಭಾ ಮಾಜಿ ಸದಸ್ಯ ರಿಯಾಝ್ ಬಂಟ್ವಾಳ, ಸಾಹಿತಿ ಪೇರೂರು ಜಾರು, ಇಸ್ಮಾಯಿಲ್ ಪೆರಿಂಜೆ ಮೊದಲಾದವರು ಭಾಗವಹಿಸಿದ್ದರು.

ಇದೇ ವೇಳೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಬ್ಯಾರಿ ಗಾದೆ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ  ಜೆ.ಹುಸೇನ್ ಪುರಸ್ಕರಿಸಿದರು.

ಹಸನಬ್ಬ ಮೂಡುಬಿದಿರೆ, ಹುಸೈನ್ ಕಾಟಿಪಳ್ಳ, ಇಬ್ರಾಹಿಮ್ ಬಾತಿಷಾ ಇವರಿಂದ ಬ್ಯಾರಿ ಗಾಯನ ನಡೆಯಿತು. ಇಬ್ರಾಹಿಂ ಕೋಣಾಜೆ ಬ್ಯಾರಿ ಕವನ ವಾಚಿಸಿದರು.

ಸಂಸ್ಥೆಯ ಗೌರವಾಧ್ಯಕ್ಷ ಯೂಸುಫ್ ವಕ್ತಾರ್ ಸ್ವಾಗತಿಸಿ, ಇಂಜಿನಿಯರ್ ಮುಹಮ್ಮದ್ ಇಕ್ಬಾಲ್ ಬ್ಯಾರಿ ಸ್ತುತಿ ಗೀತೆ ಹಾಡಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಹಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X