ಶೀಘ್ರದಲ್ಲೇ ಬಿಜೆಪಿಯಿಂದ 40 ಶಾಸಕರು ಕಾಂಗ್ರೆಸ್ಗೆ ಬರಲಿದ್ದಾರೆ: ಮಾಜಿ ಶಾಸಕ ರಾಜು ಕಾಗೆ

photo: twitter@sonupattar123
ಬೆಳಗಾವಿ, ಅ.3: ಬಿಜೆಪಿಯ 40 ಶಾಸಕರು ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಶಾಸಕ ರಾಜು ಕಾಗೆ ಹೇಳಿದ್ದಾರೆ.
ರವಿವಾರ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು.
ಬಿಜೆಪಿ ಸರಕಾರದಲ್ಲಿ ಆಂತರಿಕ ಜಗಳ ಹೆಚ್ಚಾಗಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬೆಳಗಾವಿ ಜಿಲ್ಲೆಯ ಎರಡ್ಮೂರು ಶಾಸಕರು ಕಾಂಗ್ರೆಸ್ಗೆ ಬರಲು ಸಿದ್ಧರಾಗಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟಿಯಾಗಿ ಬಂದಿದ್ದೇನೆ. ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ನನಗೆ ಮತಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ತೊಡಗಲು ಹೇಳಿದ್ದಾರೆ ಎಂದರು.
Next Story





