ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಕುಂದಾಪುರ, ಅ.3: ಟಿಪ್ಪರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಅ.2ರಂದು ಸಂಜೆ ವೇಳೆ ಕೋಟೇಶ್ವರ ಗ್ರಾಮದ ಕಿನಾರಾ ಬೀಚ್ ರಸ್ತೆಯ ಮುರ್ತಪ್ಪ ಶೇಟ್ ರೈಸ್ ಮಿಲ್ ಹತ್ತಿರ ನಡೆದಿದೆ.
ಮೃತರನ್ನು ಬೈಕ್ ಸವಾರ ವಿಜೇಂದ್ರ ಎಂದು ಗುರುತಿಸಲಾಗಿದೆ. ಕೊಟೇಶ್ವರ ಕಡೆಯಿಂದ ಬೀಜಾಡಿ ಕಡೆಗೆ ಹೋಗುತ್ತಿದ್ದ ಟಿಪ್ಪರ್, ಬೀಜಾಡಿ ಕಡೆಯಿಂದ ಕೊಟೇಶ್ವರ ಕಡೆಗೆ ಬರುತ್ತಿದ್ದ ಬೈಕಿಗೆ ಎದುರುಗಡೆಯಿಂದ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ರಸ್ತೆಗೆ ಬಿದ್ದ ವಿಜೇಂದ್ರ ಹೊಟ್ಟೆ ಹಾಗೂ ಸೊಂಟದ ಮೇಲೆ ಟಿಪ್ಪರ್ ಲಾರಿಯ ಚಕ್ರ ಹಾದು ಹೋಯಿತು. ಇದರ ಪರಿಣಾಮ ಗಂಭೀರ ಗಾಯಗೊಂಡು ಅವರು ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





