Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ...

ಕಾಂಗ್ರೆಸ್ ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದೆ ಎಂದ ಹೆಚ್ ಡಿ ಕುಮಾರಸ್ವಾಮಿ

''ಮಂತ್ರಿ ಮಾಡಿದರೆ ಬಿಜೆಪಿ ಬಿಟ್ಟು ಬರುತ್ತೇನೆ ಎಂದು ಬಿಎಸ್ ವೈ ಹೇಳಿದ್ದರು''

ವಾರ್ತಾಭಾರತಿವಾರ್ತಾಭಾರತಿ3 Oct 2021 9:46 PM IST
share
ಕಾಂಗ್ರೆಸ್ ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದೆ ಎಂದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ಮಾತ್ರ ಅಲ್ಲದೆ ದೇಶಾದ್ಯಂತ ಕಾಂಗ್ರೆಸ್ ನಶಿಸಿ ಹೋಗುತ್ತಿದ್ದು, ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಐದನೇ ದಿನದ ಜನತಾ ಪರ್ವ 1.0 ಹಾಗೂ ಮಿಷನ್ 123 ಕಾರ್ಯಗಾರದಲ್ಲಿ ಎಲ್ಲಾ ಜಿಲ್ಲೆಗಳ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಮತ ಯಂತ್ರದಂತೆ ಬಳಸಿಕೊಂಡಿತು. ರಾಜಕೀಯ ಸ್ವಾರ್ಥಕ್ಕಾಗಿ ಅಲ್ಪಸಂಖ್ಯಾತರ ಹಿತವನ್ನು ಬಲಿ ಕೊಟ್ಟಿತು ಎಂದು ಅವರು ಕಿಡಿ ಕಾರಿದರು.

ಕಳೆದ 75 ವರ್ಷಗಳಿಂದ ಕಾಂಗ್ರೆಸ್ ಮುಸ್ಲಿಮರನ್ನು ರಾಜಕೀಯವಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿದೆ. ದೇಶದಲ್ಲಿರುವ 19% ಜನರನ್ನು ದೇಶದ್ರೋಹಿಗಳು ಎಂದು ಬಿಂಬಿಸುವ ಕೆಲಸ ಈಗ ನಡೆಯುತ್ತಿದೆ. ನಾವೆಲ್ಲರೂ ಒಂದು ಎಂದು ಸಂವಿಧಾನ ಹೇಳಿದರೂ ಬಿಜೆಪಿ ತನ್ನ ಹಿಡನ್ ಅಜೆಂಡಾ ಜಾರಿ ಮಾಡುತ್ತಿದೆ. ನಿಮ್ಮನ್ನು ಸದಾ ಅನುಮಾನದಿಂದ ನೋಡುತ್ತಿದೆ. ಇದನ್ನು ನೋಡುತ್ತಾ ಕಾಂಗ್ರೆಸ್ ಜಾಣ ಮೌನದಲ್ಲಿ ಮುಳುಗಿದೆ ಎಂದರು. 

ರಾಜೀವ್ ಗಾಂಧಿ ಅಯೋಧ್ಯೆಯಲ್ಲಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ನೀಡಿದರು. ಪಿವಿ ನರಸಿಂಹ ರಾವ್ ಇದ್ದಾಗ ಬಾಬರಿ ಮಸೀದಿ ಒಡೆಯಲು ಅವಕಾಶ ಕೊಟ್ಟರು. ಮಸೀದಿಯನ್ನು ಕೆಡವುತ್ತಾರೆ ಎಂದು ಗೊತ್ತಿದ್ದರೂ ಅವರ ಸರಕಾರ ರಕ್ಷಣೆ ಕೊಡದೇ ನಿದ್ದೆ ಮಾಡುತ್ತಿತ್ತು. ಗೋಧ್ರಾ ಘಟನೆ ನಡೆದಾಗ ಹಿಂಸಾಚಾರಕ್ಕೆ ಬಿಜೆಪಿ ಕುಮ್ಮಕ್ಕು ಕೊಟ್ಟರೆ ಕಾಂಗ್ರೆಸ್ ಸುಮ್ಮನೆ ಇತ್ತು, ಅಂತಹ ವೇಳೆ ದೇವೇಗೌಡರು ಗುಜರಾತ್ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಪಸಂಖ್ಯಾತರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ್ದರು ಎಂದು ತಿಳಿಸಿದರು.

ಮನಮೋಹನ್ ಸಿಂಗ್ ಅವರ ಸರಕಾರ ಇದ್ದಾಗ ಬಿಜೆಪಿ ಮಾಡುತ್ತಿದ್ದ ಎಲ್ಲಾ ಶಾಂತಿ ಕದಡುವ ಕೆಲಸಗಳನ್ನು ನೋಡಿಕೊಂಡು ಸುಮ್ಮನಿತ್ತು. ಹೀಗೆ ಬಿಜೆಪಿಗೆ ಪರೋಕ್ಷವಾಗಿ ಎಲ್ಲಾ ದಾರಿಗಳನ್ನು ಕಾಂಗ್ರೆಸ್ ಸುಲಭ ಮಾಡಿಕೊಟ್ಟಿತು. ಇವತ್ತು ಮೋದಿ ಅವರು ಅಧಿಕಾರಕ್ಕೆ ಬರಲು ಕೂಡ ಕಾಂಗ್ರೆಸ್ ಪಕ್ಷದ ತಪ್ಪು ಹೆಜ್ಜೆಗಳೇ ಕಾರಣ ಎಂದು ಹೇಳಿದರು. 

ಕಾಂಗ್ರೆಸ್ ದಿನೇದಿನೆ ನಶಿಸಿಹೋಗುತ್ತಿದೆ. ಅದು ಆ ಪಕ್ಷದ ಸ್ವಯಂಕೃತ ಅಪರಾಧ. ರಾಷ್ಟ್ರೀಯ ಪಕ್ಷವಾಗಿದ್ದ ಕಾಂಗ್ರೆಸ್ ಇಂದು ಪ್ರಾದೇಶಿಕ ಪಕ್ಷಗಳಿಗಿಂತ ಕೆಳಗೆ ಬಂದಿದೆ. ಜನತಾ ಪರಿವಾರ ದುರ್ಬಲ ಆಗಲು ಬಿಜೆಪಿ ಕೊಡುಗೆಯೂ ಇದೇ. ಈಗ ದೇಶ ಕವಲು ದಾರಿಯಲ್ಲಿದ್ದು, ಬಿಜೆಪಿ ಬರಲು ಕಾರಣ ಯಾರು ಎಂಬುದನ್ನು ಮುಸ್ಲಿಂ ಸಮುದಾಯ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

2004ದಲ್ಲಿ ಸರಕಾರ ಮಾಡಲು ಬಿಜೆಪಿ ಮೊದಲು ನಮ್ಮ ಮನೆ ಬಾಗಿಲಿಗೆ ಬಂತು. ಎಲ್ಲಾ ಆಮಿಷಗಳನ್ನು ಒಡ್ಡಿದರು. ವಾಮನಾಚರ್ಯರು, ಇಬ್ಬರು ಪತ್ರಿಕಾ ಸ್ನೇಹಿತರು ಇದಕ್ಕೆ ಸಾಕ್ಷಿ. ಜೇಟ್ಲಿ ಈಗ ಇಲ್ಲ. ಒಡಿಶಾದ ನವೀನ್ ಪಟ್ನಾಯಕ್ ಅವರಿಗೆ ಕೊಟ್ಟ ಹಾಗೆ ನಿಮಗೂ ಸಹಕಾರ ಕೊಡುತ್ತೇವೆ ಎಂದರು. ನಾನು ಮನಸು ಮಾಡಿದ್ದರೆ ಅವರ ಬೆಂಬಲದಿಂದ ಸಿಎಂ ಆಗಿ ಕ್ರಮೇಣ ಅವರನ್ನು ದೂರ ಇಟ್ಟು ಅಧಿಕಾರ ನಡೆಸಬಹುದಿತ್ತು.  ಕಳೆದ 25 ವರ್ಷಗಳಿಂದ ನವೀನ್ ಪಟ್ನಾಯಕ್ ಅವರು ಅಧಿಕಾರ ನಡೆಸುತ್ತಿರುವ ಹಾಗೆ ನಾನು ಕೂಡ ಇಲ್ಲಿ ಮಾಡಬಹುದಿತ್ತು. ಆದರೆ ನಾನು ಹಾಗೆ ಮಾಡಲಿಲ್ಲ ಎಂದು ತಿಳಿಸಿದರು.

ಬಿಜೆಪಿ ಜತೆ ಸರಕಾರ ಮಾಡಲು ದೇವೇಗೌಡರು ಒಪ್ಪಲಿಲ್ಲ. ಆಮೇಲೆ ಇದೇ ಸಿದ್ದರಾಮಯ್ಯ, ಪಿಜಿಆರ್ ಸಿಂಧ್ಯಾ, ಎಂಪಿ ಪ್ರಕಾಶ್ ಅವರು ಐದು ದಿನ ಸೋನಿಯಾ ಗಾಂಧಿ ಅವರ ಜೊತೆ ಮಾತುಕತೆ ನಡೆಸಿದರು. ಸಿಎಂ. ಪಟ್ಟ ಬಿಟ್ಟು ಕೊಡಲು ಕಾಂಗ್ರೆಸ್ ತಯಾರು ಇರಲಿಲ್ಲ. ಸಿದ್ದರಾಮಯ್ಯ ಮುನಿಸಿಕೊಂಡು ಕರ್ನಾಟಕ ಭವನದಲ್ಲಿ ಮಲಗಿದ್ದರು. ಅವರನ್ನು ನಾನೇ ಸಮಾಧಾನಪಡಿಸಿದೆ. ಆಗ ಎಂಪಿ ಪ್ರಕಾಶ್, ಸಿಂಧ್ಯಾ ಅವರು ಡಿಸಿಎಂ ಆಗಲು ರೆಡಿ ಇದ್ದರು. ಆದರೆ ದೇವೇಗೌಡರಿಗೆ ಸಿದ್ದರಾಮಯ್ಯ ಅವರೇ ಆಗಬೇಕು ಎಂಬುದು ಇತ್ತು ಎಂದು ಹೇಳಿದರು.

ಈ ಹಗ್ಗಜಗ್ಗಾಟ ನಡುವೆ ಧರ್ಮ ಸಿಂಗ್ ಸಿಎಂ ಅದರು. ಆರು ತಿಂಗಳ ಕಾಲ  ಸಂಪುಟವೇ ಆಗಲಿಲ್ಲ. ತಲಾ ಆರು ಜನ ಮಂತ್ರಿಗಳಾದರು. ಆಗ ಕಾಂಗ್ರೆಸ್ ನಮ್ಮನ್ನು ಮೂರನೇ ದರ್ಜೆ ಪ್ರಜೆಗಳಂತೆ ನೋಡಿತು.ಈಗ ಮುಸ್ಲಿಮರನ್ನು ಕಾಂಗ್ರೆಸ್ ಹಾಗೆ ನೋಡುತ್ತಿದೆ. ಕಳೆದ ೭೦ ವರ್ಷಗಳಿಂದ ಇದೇ ಆಗಿದೆ ಎಂದರು.

ಸಿದ್ದರಾಮಯ್ಯ ನಮ್ಮ ಪಕ್ಷದಿಂದ ದೂರ ಆಗತೊಡಗುತ್ತಿದ್ದಂತೆ ಯಡಿಯೂರಪ್ಪ ಬಂದರು. ಜಸ್ಟ್ ಮಂತ್ರಿ ಮಾಡಿ ಬಿಜೆಪಿ ಬಿಟ್ಟು ಬರುತ್ತೇನೆ ಎಂದಿದ್ದರು. ಒಬ್ಬ ಗನ್ ಮ್ಯಾನ್ ಜತೆ ಚೀಟಿ ಕಳಿಸಿದ್ದರು. ಅವರಿಗೆ ಬಿಜೆಪಿ ಬಿಟ್ಟರೆ ಕೆಡುತ್ತೀರಿ ಎಂದು ಬುದ್ಧಿ ಹೇಳಿದ್ದೆ . ಅದೇ ನಾನು ಮಾಡಿದ ತಪ್ಪು. ಆವತ್ತೇ ಅವರಿಗೆ ಬಿಜೆಪಿ ಬಿಡಲು ಹೇಳಿದ್ದರೆ ಆ ಪಕ್ಷ ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದು ಹೇಳಿದರು. 

ಆಮೇಲೆ ಸಿಎಂ ಉದಾಸಿ ಸೇರಿ ಜನತಾ ಪರಿವಾರದ ನಾಯಕರು ಬಂದು  ಜೆಡಿಎಸ್ - ಬಿಜೆಪಿ ಸರಕಾರ ರಚನೆ ಮಾಡಲು ಬೇಡಿಕೊಂಡರು. ಕೊನೆಗೆ ಬಿಜೆಪಿ ಸರಕಾರ ರಚನೆ ಮಾಡಿ ನಮ್ಮ ತಂದೆ ಆರೋಗ್ಯ ಹಾಳಾಗಲು ನಾನೇ ಕಾರಣ ಆದೆ. ಒಂದು ವೇಳೆ ಸಿದ್ದರಾಮಯ್ಯ ಅವರು ಜೆಡಿಎಸ್ ಬಿಡದೆ ಹೋಗಿದ್ದಿದ್ದರೆ ಬಿಜಿಪಿ ಅಧಿಕಾರಕ್ಕೆ ಬರಲು ಆಗ್ತಾ ಇರಲಿಲ್ಲ. ಇದು ವಸ್ತು ಸ್ಥಿತಿ ಎಂದರು.

ಬಿಜೆಪಿ ಜತೆ ಇದ್ದಾಗಲೂ ನಾವು ಮುಸ್ಲಿಂ ಸಮುದಾಯದ ಹಿತ ಕಡೆಗಣಿಸಿಲ್ಲ. ಬಿಜೆಪಿ ಮೈತ್ರಿ ಸರಕಾರ ಇದ್ದಾಗಲೇ ಸದಾನಂದ ಗೌಡರು ನ್ಯಾಯಾಲಯದ ಆದೇಶ ಉಲ್ಲಂಘಿಸಿ ದತ್ತಪೀಠ ಪ್ರವೇಶ ಮಾಡಲು ಹೋದರು. ಆವತ್ತು ಉಪ ಮುಖ್ಯಮಂತ್ರಿ ಆಗಿದ್ದವರು ನನ್ನ ಪಕ್ಕ ಕೂತಿದ್ದರು. ವಿಷಯ ಗೊತ್ತಾದ ಕೂಡಲೇ  ಅರೆಸ್ಟ್ ಮಾಡಿ ಎಂದು ಪೊಲೀಸರಿಗೆ ಹೇಳಿದೆ. ಸದಾನಂದ ಗೌಡರು ಜೈಲಲ್ಲಿ ಕೂರಬೇಕಾಯಿತು ಎಂದು ನೆನಪಿಸಿಕೊಂಡರು.

ಸಿಂಧಗಿ ಮತ್ತು ಹಾನಗಲ್ ಅಭ್ಯರ್ಥಿಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾಲ್ಕು ತಿಂಗಳ ಹಿಂದೆಯೇ ನಾನು ನಾಜೀಯಾ ಶಕೀಲಾ ಅಂಗಡಿ ಅವರಿಗೆ ಚುನಾವಣೆ ಕೆಲಸ ಶುರು ಮಾಡಿಕೊಳ್ಳುವಂತೆ ಹೇಳಿದ್ದೆ. ಅಲ್ಲಿನ ಪರಿಸ್ಥಿತಿ ನನಗೆ ಗೊತ್ತಿದೆ. ಶಕೀಲಾ ಅವರು ಎಂ ಎ ಪದವೀಧರೆ. ನಮ್ಮ ಪಕ್ಷಕ್ಕಾಗಿ ತ್ಯಾಗ ಮಾಡಿದ ಕುಟುಂಬಕ್ಕೆ ಸೇರಿದವರು. ಹಾಗೆಯೇ ಹಾನಗಲ್ ನಲ್ಲಿ ಎಂ ಟೇಕ್ ಓದಿರುವ ನಿಯಾಜ್ ಶೇಕ್ ಎಂಬ ಯುವಕನಿಗೆ ಟಿಕೆಟ್ ಕೊಟ್ಟಿದ್ದೇವೆ ಎಂದರು. 

ಇಲ್ಲಿಂದ ನೀವೂ (ಪ್ರತಿನಿಧಿಗಳು) ದೃಢ ನಿರ್ಧಾರ ಮಾಡಿ ಹೋಗಬೇಕು. ಜೆಡಿಎಸ್ ಎಷ್ಟು ಮುಖ್ಯ ಎಂಬುದನ್ನು ನೀವು ಅರಿಯಬೇಕು. ಬಿಜೆಪಿ ಮೊದಲಿನಿಂದಲೂ ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಅದಕ್ಕೆ ತಡೆ ಹಾಕಬೇಕಿದೆ. ಬಿಜೆಪಿಗೆ ಶಕ್ತಿ ಬಂದಿದೆ. ಹಣ ಲೂಟಿ ಮಾಡಿದ್ದಾರೆ. ಅದರ ಅಂಗ ಸಂಸ್ಥೆಗಳಿಗೆ ಹಣದ ಕೊರತೆ ಇಲ್ಲ. ಹಳ್ಳಿ ಹಳ್ಳಿಗೂ ನುಗ್ಗಿದ್ದಾರೆ. ಕಾಂಗ್ರೆಸ್ ನಿಂದ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ. ನೀವು ಸಂಘಟಿರಾಗಬೇಕು. ನಮ್ಮಿಂದ ಸೋಲಿಸಲು ಸಾಧ್ಯವಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X