Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಶ್ವರಪ್ಪ ಹಾಸಿಗೆ ಸಿದ್ಧಪಡಿಸಿದರೆ...

ಈಶ್ವರಪ್ಪ ಹಾಸಿಗೆ ಸಿದ್ಧಪಡಿಸಿದರೆ ಆಸ್ಪತ್ರೆಗೆ ದಾಖಲಾಗಲು ನಾನು ಸಿದ್ದ: ಡಿ.ಕೆ.ಶಿವಕುಮಾರ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ3 Oct 2021 10:01 PM IST
share
ಈಶ್ವರಪ್ಪ ಹಾಸಿಗೆ ಸಿದ್ಧಪಡಿಸಿದರೆ ಆಸ್ಪತ್ರೆಗೆ ದಾಖಲಾಗಲು ನಾನು ಸಿದ್ದ: ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು, ಅ. 3: `ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರು ಆದಷ್ಟು ಬೇಗ ಆಸ್ಪತ್ರೆಯಲ್ಲಿ ಹಾಸಿಗೆ (ಬೆಡ್) ಸಿದ್ಧಪಡಿಸಿದರೆ ನಾನು ಕೂಡಲೇ ದಾಖಲಾಗುತ್ತೇನೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಸವಾಲು ಹಾಕಿದ್ದಾರೆ.

ರವಿವಾರ ದೇವನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಯಾರೋ ಒಬ್ಬರು ಮಂತ್ರಿಯಾಗಿದ್ದವರು 24 ಗಂಟೆಗಳಲ್ಲಿ ಕಾಂಗ್ರೆಸ್‍ನ 5 ದೊಡ್ಡ ನಾಯಕರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದಿದ್ದರು. ನಳಿನ್ ಕುಮಾರ್ ಕಟೀಲ್ ಅವರು 20 ಜನ ಶಾಸಕರು ಸರದಿಯಲ್ಲಿ ನಿಂತಿದ್ದಾರೆಂದು ಹೇಳಿದ್ದರು' ಎಂದು ವಾಗ್ದಾಳಿ ನಡೆಸಿದರು.

`ನಾವು ಯಾರಾದರೂ ಒಬ್ಬ ಶಾಸಕರು ನಮ್ಮ ಪಕ್ಷ ಸೇರುತ್ತಾರೆಂದು ಹೆಸರು ಹೇಳಿದ್ದೇವೆಯೇ? ನಮ್ಮ ರಾಜಕಾರಣ ನಾವು ಮಾಡುತ್ತಿದ್ದೇವೆ. ಇವರಿಗೆ ಭಯ ಏಕೆ? ನನ್ನನ್ನು ಮಾನಸಿಕ (ಮೆಂಟಲ್) ಆಸ್ಪತ್ರೆಗೆ ಸೇರಿಸಲು ಅವರು ಬಯಸಿದ್ದು, ಹಾಸಿಗೆ ವ್ಯವಸ್ಥೆ ಕಲ್ಪಿಸಿದರೆ ನಾನು ಹೋಗಿ ದಾಖಲಾಗುತ್ತೇನೆ' ಎಂದು ಶಿವಕುಮಾರ್ ತಿರುಗೇಟು ನೀಡಿದರು.

ಕುಮಾರಣ್ಣನಿಗೆ ಗೊತ್ತಿದೆ: `ನಾನು ಕುಮಾರಣ್ಣನಿಗೆ ಒಂದು ಮನವಿ ಮಾಡಿಕೊಳ್ಳುತ್ತೇನೆ. ಈ ರಾಜ್ಯದ ಚರಿತ್ರೆಯನ್ನೇ ತೆಗೆದುಕೊಂಡರೆ ದೇವರಾಜ ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್, ಗುಂಡೂರಾವ್, ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ಸಮಾಜಕ್ಕೆ ಯಾವುದಾದರೂ ಪಕ್ಷ ಅಧಿಕಾರ ಕೊಟ್ಟಿದೆ ಎಂದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಎಲ್ಲ ವರ್ಗದ ಪರ ಕಾರ್ಯಕ್ರಮ ರೂಪಿಸುತ್ತದೆ ಎಂದು ಶಿವಕುಮಾರ್ ಹೇಳಿದರು.

`ಬಿಜೆಪಿಯಲ್ಲಾಗಲಿ, ಜನತಾದಳದಲ್ಲಾಗಲಿ ಒಕ್ಕಲಿಗರು ಹಾಗೂ ಲಿಂಗಾಯತರನ್ನು ಹೊರತುಪಡಿಸಿ ಬೇರೆ ಸಮುದಾಯದವರಿಗೆ ಅಧಿಕಾರ ನೀಡಿರುವ ಒಂದು ಉದಾಹರಣೆ ನೀಡಲಿ. ಅವರಿಗೆ ಆ ಇತಿಹಾಸವೇ ಇಲ್ಲ. ನಮ್ಮ ಪಕ್ಷ ಕಾಲಕಾಲಕ್ಕೆ ಆಯಾ ಸಮುದಾಯಕ್ಕೆ ನಾಯಕತ್ವ, ರಾಜಕೀಯ ಪಾಲುದಾರಿಕೆ, ಮೀಸಲಾತಿ ಕಲ್ಪಿಸಿದೆ' ಎಂದು ಶಿವಕುಮಾರ್ ವಿವರಣೆ ನೀಡಿದರು.

ಸಾಂಪ್ರದಾಯಿಕ ವೃತ್ತಿ ಅವಲಂಬಿತರಿಗೆ ಕೋವಿಡ್ ಸಮಯದಲ್ಲಿ ಪರಿಹಾರ ನೀಡಬೇಕೆಂದು ಹೋರಾಟ ಮಾಡಿದ್ದೇವೆ. ನಾನು ಯಾರಿಗೂ ಭಯಪಡುವ ಅಗತ್ಯವಿಲ್ಲ. ನನಗೆ ನಡುಕ ಬರುತ್ತದೆಯೋ ಇಲ್ಲವೋ ಎಂಬುದು ಕುಮಾರಣ್ಣನಿಗೆ ಚೆನ್ನಾಗಿ ಗೊತ್ತಿದೆ. ರಾಜಕಾರಣ ಮಾತನಾಡುತ್ತಾರೆ, ಮಾತನಾಡಲಿ. ನಾನು ವಿವಿಧ ಸಮಾಜದವರನ್ನು ಭೇಟಿ ಮಾಡಿಕೊಂಡು ಅವರ ನೋವು ತಿಳಿದು, ಅವರ ಏಳ್ಗೆ ಬಗ್ಗೆ ಚರ್ಚಿಸುತ್ತಿದ್ದೇವೆ. ಸಾಮಾಜಿಕ ನ್ಯಾಯ ಕಾಂಗ್ರೆಸ್ ಪಕ್ಷದ ಬದ್ಧತೆ' ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

`ನಿಮ್ಮ ಸಮಾಜದ ಸಮಸ್ಯೆ ಏನು? ನಿಮ್ಮ ಕಲ್ಯಾಣಕ್ಕೆ ನಾವು ಯಾವ ದಿಕ್ಕಿನಲ್ಲಿ ಹೋಗಬೇಕೆಂಬುದನ್ನು ತಿಳಿಸಿ. ಗಾಣಿಗ ಸಮಾಜಕ್ಕೆ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬಬೇಕು. ಯಾವುದೇ ಒಂದು ಸರಕಾರಕ್ಕೆ ಗುರಿ ಇರಬೇಕು. ನಿಮ್ಮ ಸಮಸ್ಯೆ ತಿಳಿಸಿದರೆ ಚುನಾವಣೆಗೆ ಹೋದಾಗ ಈ ಸಮಾಜದ ಏಳಿಗೆಗೆ ಪೂರಕವಾಗಿ ನಮ್ಮ ಪ್ರಣಾಳಿಕೆ ಸಿದ್ಧಪಡಿಸುತ್ತೇವೆ'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X