ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ; ಅಧ್ಯಕ್ಷರಾಗಿ ಕೆ.ಅಬ್ದುಲ್ ಜಬ್ಬಾರ್ ನೇಮಕ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿಯಾದ ಕೆ.ಅಬ್ದುಲ್ ಜಬ್ಬಾರ್
ಬೆಂಗಳೂರು, ಅ.3: ಕೆಪಿಸಿಸಿ ಅಲ್ಪಸಂಖ್ಯಾತರ ರಾಜ್ಯ ಘಟಕ ಅಧ್ಯಕ್ಷರಾಗಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.
ರವಿವಾರ ಅಲ್ಪಸಂಖ್ಯಾತರ ರಾಜ್ಯ ಘಟಕ ಅಧ್ಯಕ್ಷರಾಗಿರುವ ಅಬ್ದುಲ್ ಜಬ್ಬಾರ್ ನೇತೃತ್ವದ ನಿಯೋಗ ಇಲ್ಲಿನ ಸದಾಶಿವನಗರದ ನಿವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಇಸ್ಲಾಮ್ಪುರದ ಹಝರತ್ ತನ್ವೀರ್ ಹಶ್ಮಿ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕ ಎನ್.ಎ.ಹಾರೀಸ್ ಸೇರಿದಂತೆ ಪ್ರಮುಖರಿದ್ದರು.
Next Story





