Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ ಹಿನ್ನಲೆ: ಅ.7 ರಿಂದ ಅ.15...

ಮೈಸೂರು ದಸರಾ ಹಿನ್ನಲೆ: ಅ.7 ರಿಂದ ಅ.15 ರವರೆಗೆ ಸಂಚಾರ ನಿಯಮದಲ್ಲಿ ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ3 Oct 2021 11:54 PM IST
share
ಮೈಸೂರು ದಸರಾ ಹಿನ್ನಲೆ: ಅ.7 ರಿಂದ ಅ.15 ರವರೆಗೆ ಸಂಚಾರ ನಿಯಮದಲ್ಲಿ ಬದಲಾವಣೆ

ಮೈಸೂರು,ಅ.3: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ  ಶುರುವಾಗಿದ್ದು ದಸರಾ ವೇಳೆ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತ  ಡಾ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 7 ರಿಂದ ಅ.15 ರವರೆಗೆ ಹೊಸ ಆದೇಶ ಜಾರಿ ಮಾಡಲಾಗಿದ್ದು ನಗರದ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ನಗರ ಹೃದಯಭಾಗದ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ.

ಅಂಬಾವಿಲಾಸ ಅರಮನೆ ಸುತ್ತ ಮುತ್ತ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ. ಸಯ್ಯಾಜಿರಾವ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ, ಪುರಂದರ ರಸ್ತೆ ಬಿ. ರಾಚಯ್ಯ ವೃತ್ತದಿಂದ ಬಿ.ಎನ್ ರಸ್ತೆ ಜಂಕ್ಷನ್ ವರೆಗೆ, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದಿಂದ ಜಯಚಾಮರಾಜೇಂದ್ರ ವೃತ್ತದವರೆಗೆ, ಆಲ್ಬರ್ಟ್ ವಿಕ್ಟರ್ ರಸ್ತೆಯ ಜಯಚಾಮರಾಜೇಂದ್ರ ವೃತ್ತದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದವರೆಗೆ, ಅಶೋಕ ರಸ್ತೆಯ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ, ಅಶೋಕ ರಸ್ತೆಯ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ, ಬಲರಾಮ ದ್ವಾರದ ಮುಂಭಾಗ, ಡಾ. ರಾಜ್‍ಕುಮಾರ್ ವೃತ್ತದಿಂದ ಬಿ.ಎನ್. ನರಸಿಂಹಮೂರ್ತಿ ವೃತ್ತದವರೆಗೆ, ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯ ಬಿಎನ್ ರಸ್ತೆ ಜಂಕ್ಷನಿಂದ ಮೃಗಾಲಯದ ರಸ್ತೆವರೆಗೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆ ಮೃಗಾಲಯದ ವೃತ್ತದಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ, ಮಾನಸರ ರಸ್ತೆಯ ವಾಣಿವಿಲಾಸ ರಸ್ತೆ ಜಂಕ್ಷನ್‍ನಿಂದ ಲೋಕರಂಜನ್ ರಸ್ತೆ ವರೆಗೆ, ಮಲೆ ಮಹದೇಶ್ವರ ರಸ್ತೆಯ ಬಿ.ಎನ್.ರಸ್ತೆ ಜಂಕ್ಷನ್‍ನಿಂದ (ಛತ್ರಿಮರ) ಚನ್ನಯ್ಯ ವೃತ್ತದವರೆಗೆ, ಸರ್ಕಾರಿ ಭವನದ ರಸ್ತೆಯ ಸರ್ಕಾರಿ ಭವನದ ದ್ವಾರದ ರಾಜೇಂದ್ರ ಒಡೆಯರ್ ವೃತ್ತದವರೆಗೆ, ಸಂಪೂರ್ಣ ವಾಹನ ನಿಲುಗಡೆ ನಿಷೇಧಿಸಿ ಪೊಲೀಸ್ ಕಮಿಷನರ್ ಡಾ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಪ್ರತಿದಿನ ಮಧ್ಯಾಹ್ನ 4-00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ಈ ನಿಯಮ ಜಾರಿಯಲ್ಲಿರುಲಿದೆ.

ಹಲವು ರಸ್ತೆಗಳಲ್ಲಿ ತಾತ್ಕಾಲಿಕ ಏಕಮುಖ ವಾಹನ ಸಂಚಾರ ವ್ಯವಸ್ಥೆ: 

ಅಲ್ಲದೆ ನಗರದಲ್ಲಿ ಹಲವು ರಸ್ತೆಗಳಲ್ಲಿ ತಾತ್ಕಾಲಿಕ ಏಕಮುಖ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಅರಮನೆಯ ಸುತ್ತಲಿನ ರಸ್ತೆಗಳು, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ,  ಕುಸ್ತಿ ಅಖಾಡ ಜಂಕ್ಷನ್, ಬಿ.ಎನ್.ರಸ್ತೆ ಜಯಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ಪಿಕ್ಚರ್ ರಸ್ತೆ, ಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ನ್ಯೂ ಎಸ್.ಆರ್.ರಸ್ತೆ, ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ,  ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದಲ್ಲಿ ಏಕಮುಖ ಸಂಚಾರಕ್ಕೆ ಆದೇಶ ಮಾಡಲಾಗಿದೆ. ಇದರ ಜೊತೆಗೆ ಮೈಸೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ಏಕ ಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಏಕಮುಖ ಸಂಚಾರ ವ್ಯವಸ್ಥೆ ಇರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X