Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯ...

ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯ ಕಡೆಗಣನೆ: ಹೆಚ್.ಡಿ. ರೇವಣ್ಣ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Oct 2021 7:04 PM IST
share
ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯ ಕಡೆಗಣನೆ: ಹೆಚ್.ಡಿ. ರೇವಣ್ಣ ಆರೋಪ

ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯನ್ನು ಕಡೆಗಣಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಬಿಜೆಪಿ ಸರಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಎಚ್ಚರಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧಿಕಾರವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಯಂತಹ ಯಾವ ಕೆಲಸಗಳು ಸಮರ್ಪಕವಾಗಿ ಆಗಿರುವುದಿಲ್ಲ. ಪ್ರಸ್ತುತದಲ್ಲಿರುವ ಬಸವರಾಜ್ ಬೊಮ್ಮಾಯಿ ಅವರಿಗೂ ಕೂಡ ಅಭಿವೃದ್ಧಿ ವಿಚಾರದಲ್ಲಿ ಮನವಿ ಮಾಡಲಾಗಿದ್ದರೂ ಯಾವ ಪ್ರಯೋಜನವಾಗಿರುವುದಿಲ್ಲ. ಇನ್ನು ಅಧಿವೇಶನದಲ್ಲೂ ಮನವಿ ಮಾಡಿದರೂ ಗಮನ ನೀಡಿರುವುದಿಲ್ಲ ಎಂದು ಬೇಸರವ್ಯಕ್ತಪಡಿಸಿದರು.

ಹಾಸನ, ಸಿಂದಗಿಯಲ್ಲಿ ತೋಟಗಾರಿಕೆ ಪದವಿ ಶಿಕ್ಷಣ ಕಾಲೇಜು ತೆರೆಯಲು ಎಲ್ಲ ರೀತಿಯ ನೆರವನ್ನು ಎಚ್.ಡಿ. ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ನೀಡಲಾಗಿತ್ತು. ಈಗ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ತಡೆಹಿಡಯಲಾಗಿದೆ. ಇಂತಹ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಮಾಡುವ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಪಕ್ಷದ ಎಲ್ಲಾ ಶಾಸಕರೊಂದಿಗೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

 ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದರು ರಾಜ್ಯದ ಪದವಿ ಕಾಲೇಜುಗಳಿಗೆ ಉಪನ್ಯಾಸಕರನ್ನು ನೇಮಕ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ನನ್ನ ಕ್ಷೇತ್ರದ ಕಾಲೇಜಿನಲ್ಲಿಯೇ 18 ಮಂದಿ ಉಪನ್ಯಾಸಕರ ಕೊರತೆ ಇದೆ. ಕಾಂಗ್ರೆಸ್ ನಲ್ಲಿ ರಾಜ್ಯದಲ್ಲಿ ಹೀನಾಯ ಪರಿಸ್ಥಿತಿ ಎದುರಿಸುತ್ತಿದೆ. ಕೋಮುವಾದಿ ಪಕ್ಷದ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಕೆಲಸ ಮಾಡುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂದು ಸಾಬೀತಾಗಿದೆ ಎಂದರು.

ದೇಶದಲ್ಲಿ ಕಾಂಗ್ರೆಸ್ ಬಂದು 60 ವರ್ಷ ಆಳಿದರು ಯಾವ ಸಮಾಜವನ್ನು, ಜಾತಿಯನ್ನು ಗುರುತಿಸಿ ಅವರ ಉದ್ದಾರಕ್ಕೆ ಯಾವ ಜನಪರ ಕಾರ್ಯಕ್ರಮ ಮಾಡಿದ್ದೀರಿ ಎಂದು ಸವಾಲು ಹಾಕಿದರು. ರಾಜಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಶೇಕಡ 33 ಮೀಸಲಾತಿ ನೀಡಿದ ಹಿರಿಮೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರದಾಗಿದೆ. ನೆಹರು ಕಾಂಗ್ರೆಸ್ ಇಲ್ಲ. ಈಗ ಇರುವುದು ಡೋಂಘಿ ಕಾಂಗ್ರೆಸ್" ಇರೋದು ! ಇವರಿಂದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತು ಕೇಳಬೇಕಿಲ್ಲ. 60 ವರ್ಷದಲ್ಲಿ ಕಾಂಗ್ರೆಸ್ ಕೊಡುಗೆ ಏನಿದೆ ಎಂದು ಪಶ್ನಿಸಿದರು. ಮುಂದಿನ ಚುನಾವಣೆ ನಂತರ ಸಣ್ಣ ಜನಾಂಗದ ದಲಿತರಿಗೆ ಸಿಎಂ ಸ್ಥಾನ ಕೊಡುವುದಾಗಿ ತಾಕತ್ತಿದ್ದರೇ ಕಾಂಗ್ರೆಸ್ ಘೋಷಣೆ ಮಾಡಲಿ ನೋಡೋಣ ಎಂದು ಟೀಕಿಸಿದರು.

ನಮ್ಮದು ಒಕ್ಕಲಿಗರ ಮತ್ತು ಲಿಂಗಾಯಿತರ ಪಕ್ಷವಲ್ಲ. ಸರ್ವ ಪಕ್ಷವಾಗಿದ್ದು, ದೇಶದಲ್ಲಿ ಸಣ್ಣ ಪುಟ್ಟ ಜನಾಂಗದವರು ಅಧಿಕಾರಿ ಹಿಡಿಯಲು ಎಚ್.ಡಿ. ದೇವೇಗೌಡ ಅವರು ಮೀಸಲಾತಿಗೆ ಅವಕಾಶ ನೀಡಿದೆ. ಕೇವಲ ಮತ ಬ್ಯಾಂಕ್ ಗೆ ಜಾತಿಗಳ ನಡುವೆ ವೈಷಮ್ಯದ ವಿಷಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಪಕ್ಷ ಮಾಡಬಾರದು ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X