Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಅಭಿವೃದ್ಧಿಯಲ್ಲಿ ಜನರ...

ಬೆಂಗಳೂರು ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ4 Oct 2021 7:29 PM IST
share
ಬೆಂಗಳೂರು ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ. 4: ಬೃಹತ್ ಬೆಂಗಳೂರು ಮಹಾನಗರದ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ. ಸಾರ್ವಜನಿಕರ ಸಲಹೆ-ಸೂಚನೆಗಳನ್ನು ಪಡೆಯಲು ನಗರದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ರಾಜಾಜಿನಗರ ಕ್ಷೇತ್ರದಲ್ಲಿ ಶಿವನಗರ 1 ಮತ್ತು 8ನೆ ಮುಖ್ಯರಸ್ತೆ ಕೂಡುವ ಸ್ಥಳದಲ್ಲಿ 71.98 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂಟಿಗ್ರೇಟೆಡ್ ಮೇಲ್ಸೇತುವೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನ ಎಲ್ಲ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್‍ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತಿದ್ದು, ಆಧುನಿಕ ತಂತ್ರಜ್ಞಾನದ ಬಳಕೆಯಿಂದ  ಶೀಘ್ರದಲ್ಲಿಯೇ ಎಲ್ಲ್ಲ 28 ಕ್ಷೇತ್ರಗಳಲ್ಲಿ ಪ್ರಾರಂಭ ಮಾಡಲಾಗುವುದು ಎಂದು ಹೇಳಿದರು.

ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಅತಿ ಹೆಚ್ಚು ಜನದಟ್ಟಣೆ ಇರುವ ಶಿವನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟಣೆ ಕಡಿಮೆ ಮಾಡಲು ಇಂಟಿಗ್ರೇಟೆಡ್ ಮೇಲ್ಸೇತುವೆ ಬಹಳ ಸಹಕಾರಿಯಾಗಿದೆ. ಈ ಕ್ಷೇತ್ರದ ಬಡಾವಣೆಯನ್ನು ಒಟ್ಟುಗೂಡಿಸಿರುವ ಕೆಲಸ ಅಭಿನಂದನೀಯ. ತುಮಕೂರು-ಮೈಸೂರು ಹೆದ್ದಾರಿ ಹೈಡೆನ್ಸಿಟಿ ಕಾರಿಡಾರ್ ಆಗಿದ್ದು, ವೆಸ್ಟ್ ಆಫ್ ಕರ್ಡ್ ರೋಡ್ ಬಳಿ ವಾಹನ ದಟ್ಟಣೆ ಜಾಸ್ತಿ ಇರುತ್ತದೆ.

ಸೋಪ್ ಫ್ಯಾಕ್ಟರಿಯಿಂದ ಮೈಸೂರು ರಸ್ತೆ ತನಕ ತಡೆರಹಿತ ರಸ್ತೆ ನಿರ್ಮಾಣ ಮಾಡಲು ಬಸವೇಶ್ವರ ನಗರ ಲಿಂಕ್ ಮಾಡುವ ಮಹತ್ವದ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ನೀಡಿದರೆ ಜನಸ್ಪಂದನೆಯುಳ್ಳ ಜನಪರ ಸರಕಾರ ಎನಿಸಿಕೊಳ್ಳುತ್ತದೆ. ನಗರ ಯೋಜನೆಯ ದೃಷ್ಟಿಕೋನ ಬದಲಾವಣೆ ಆಗಿ, ಬೆಂಗಳೂರಿನ ಯೋಜನಾಬದ್ಧ ಸಮಗ್ರ ಅಭಿವೃದ್ಧಿ ಹೊಂದಬೇಕು ಎಂದ ಅವರು, ಬಂಡವಾಳ ಹೂಡಿಕೆ, ಪ್ರವಾಸೋದ್ಯಮ ಮುಂತಾದ ಎಲ್ಲ ಕ್ಷೇತ್ರಗಳಿಗೂ ಬೆಂಗಳೂರನ್ನು ಗುರುತಿಸಲಾಗುತ್ತದೆ. ಆದುದರಿಂದ ಅಂತರರಾಷ್ಟ್ರೀಯ ಮಟ್ಟದ ಸೇವೆಯನ್ನು ನೀಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಯೋಜನಾಬದ್ದ ಹಾಗೂ ಹೊಸ ಚಿಂತನೆಯ ಬೆಂಗಳೂರು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕ ಸುರೇಶ್ ಕುಮಾರ್ ಕೆಳಹಂತದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ನಾಗರಿಕ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸಮಸ್ಯೆಗಳ ಪರಿಹಾರದ ಜೊತೆಗೆ ಅವರು ಸದಾ ಇರುತ್ತಾರೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜಕಾಲುವೆ, ಕರೆಗಳನ್ನು ನಿರ್ಮಿಸಿರುವುದು, ತಗ್ಗು ಪ್ರದೇಶದಲ್ಲಿ ನೀರು ಹರಿಯದಂತೆ ತಡೆಯುವುದು ಮುಂತಾದ ಕ್ರಮಗಳನ್ನು ಕೈಗೊಂಡು ಬೆಂಗಳೂರನ್ನು ಸುರಕ್ಷಿತ, ಸುಂದರ, ಹಸಿರು ನಗರವನ್ನಾಗಿಸಲು ಸರ್ಕಾರವು ಬದ್ಧವಿದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಕೆ.ಗೋಪಾಲಯ್ಯ, ಶಾಸಕ ಸುರೇಶ್ ಕುಮಾರ್, ಸಂಸದರಾದ ಪಿ.ಸಿ.ಮೋಹನ್, ಡಾ.ಎಲ್.ಹನುಮಂತಯ್ಯ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X