Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆ ಗುಂಡಿ ಮುಚ್ಚಲು ಇಟ್ಟಿದ್ದ...

ರಸ್ತೆ ಗುಂಡಿ ಮುಚ್ಚಲು ಇಟ್ಟಿದ್ದ 20ಸಾವಿರ ಕೋಟಿ ರೂ.ಎಲ್ಲಿ ಹೋಯಿತು: ಮುಖ್ಯಮಂತ್ರಿಗೆ ಎಚ್ ಡಿಕೆ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ4 Oct 2021 7:45 PM IST
share
ರಸ್ತೆ ಗುಂಡಿ ಮುಚ್ಚಲು ಇಟ್ಟಿದ್ದ 20ಸಾವಿರ ಕೋಟಿ ರೂ.ಎಲ್ಲಿ ಹೋಯಿತು: ಮುಖ್ಯಮಂತ್ರಿಗೆ ಎಚ್ ಡಿಕೆ ಪ್ರಶ್ನೆ

ಬೆಂಗಳೂರು, ಅ.4: ಮಹಾಮಳೆಯಿಂದ ಬೆಂಗಳೂರು ಮತ್ತೆ ತತ್ತರಿಸಿದೆ. ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಜನ ಸಾಯುತ್ತಿದ್ದಾರೆ. ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು 20 ಸಾವಿರ ಕೋಟಿ ರೂ.ಹಣ ಖರ್ಚು ಮಾಡಿದ್ದೇವೆ ಎಂದು ಸದನದಲ್ಲಿ ಮುಖ್ಯಮಂತ್ರಿ ಹೇಳಿದ್ದರು. ಆ ಹಣ ಎಲ್ಲಿ ಹೋಯಿತು? ಎಲ್ಲಿ ಖರ್ಚಾಯಿತು? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಸೋಮವಾರ ಜನತಾ ಪರ್ವ 1.0 ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತೋಟದಲ್ಲಿ ಹಮ್ಮಿಕೊಂಡಿರುವ ಕಾರ್ಯಾಗಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಒಂದೇ ಮಳೆ ನಗರದಲ್ಲಿ ದೊಡ್ಡ ಅನಾಹುತ ಉಂಟು ಮಾಡಿದೆ. ರಸ್ತೆಗಳ ಮೇಲೆ ನೀರು ನದಿಯಂತೆ ಹರಿದಿದೆ. ನಿರ್ವಹಣೆ ಕಳಪೆಯಾಗಿದೆ. ಹಾಗಾದ್ರೆ ರಸ್ತೆಗಳಿಗೆ ತೆಗೆದಿಟ್ಟ ಹಣ ಎಲ್ಲಿ ಹೋಯಿತು?  ಎಂದರು.

ಅಷ್ಟು ಹಣವನ್ನು ಯಾವುದಕ್ಕೆ ಬಳಕೆ ಮಾಡಿಕೊಂಡರು. ಅಷ್ಟು ಹಣ ವೆಚ್ಚ ಆಗಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿ ಬಂದಿದೆ. ಅದಕ್ಕೆ ಮುಖ್ಯಮಂತ್ರಿ ಪ್ರತಿಕ್ರಿಯೆ ಕೊಟ್ಟಿದ್ದರು. ಇದಕ್ಕೆ ಜನರಿಗೆ ಉತ್ತರ ಬೇಕಿದೆ ಎಂದು ಅವರು ನೇರವಾಗಿ ಮುಖ್ಯಮಂತ್ರಿ ಅವರನ್ನೇ ಕೇಳಿದರು.

ನಿನ್ನೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನೂರಾರು ಕೋಟಿ ರೂ.ವೆಚ್ಚದ ಯೋಜನೆಗಳಿಗೆ ಸಿಎಂ, ಸಚಿವರು ಚಾಲನೆ ನೀಡಿದ್ದರು. ಆದರೆ ಸಂಜೆಗೆ ಮಳೆ ಬಂದು ಆ ಕ್ಷೇತ್ರದಲ್ಲಿ ಆಗಿರುವ ಪ್ರಗತಿಯನ್ನು ಬೆತ್ತಲು ಮಾಡಿತು. ಮನೆಗಳಿಗೆ ನೀರು ನುಗ್ಗಿ ಜನ ಇಡೀ ರಾತ್ರಿ ಜಾಗರಣೆ ಮಾಡಿದರು. ಮಳೆ ನೀರಿನಲ್ಲಿ ಹಸು, ಕುರಿಗಳು ಕೊಚ್ಚಿಕೊಂಡು ಹೋಗಿವೆ. ಇವರು ಯಾವ ರೀತಿಯ ಅಭಿವೃದ್ಧಿಯನ್ನು ಮಾಡಿದ್ದಾರೆ ಎಂದು ಕುಮಾರಸ್ವಾಮಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ತನಿಖೆಗೆ ಒತ್ತಾಯ: ರಾಜರಾಜೇಶ್ವರಿ ನಗರ ಕ್ಷೇತ್ರ ಪ್ರಗತಿಗೆ ಹಲವಾರು ವರ್ಷಗಳಿಂದ ಕೋಟ್ಯಂತರ ರೂಪಾಯಿ ಹಣ ಹರಿದು ಬಂದಿದೆ. ಈ ಹಣ ಎಲ್ಲಿ ಹೋಯಿತು? ನಿರಂತರವಾಗಿ ಈ ಕ್ಷೇತ್ರಕ್ಕೆ ಹರಿದ ಹಣದ ಹೊಳೆ ಎತ್ತ ಹರಿಯಿತು? ಈ ಹಣವೂ ಸೇರಿ ಗುಂಡಿಗಳಿಗೆ ಖರ್ಚಾಗಿದೆ ಎಂದು ಸಿಎಂ ಹೇಳಿದ್ದ 20 ಸಾವಿರ ಕೋಟಿ ರೂ.ಹಣ ಏನಾಯಿತು ಎಂಬ ಮಾಹಿತಿ ಜನರಿಗೆ ಬೇಡವೇ? ಈ ಬಗ್ಗೆ ತನಿಖೆ ಆಗಲಿ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

ಮಳೆ ಅನಾಹುತವನ್ನು ತಡೆಯಲು ಪ್ರತಿವರ್ಷ ಸಾವಿರಾರು ಕೋಟಿ ಖರ್ಚು ಮಾಡುತ್ತೇವೆ. ಬೆಂಗಳೂರಿನ ಯಾವ ಭಾಗದಲ್ಲಿ ಎμÉ್ಟಲ್ಲ ಹಣ ಖರ್ಚಾಗಿದೆ ಎಂಬ ಮಾಹಿತಿ ಜಾರಿಗೆ ಗೊತ್ತಾಗಬೇಕಿದೆ ಎಂದು ಅವರು ತಿಳಿಸಿದರು.

ಸಭೆ ನಡೆಸಲು ಪರ್ಮಿಷನ್ ಬೇಕಿತ್ತು: ನಾನು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ಉಸ್ತುವಾರಿ ಕಾಂಗ್ರೆಸ್ ಪಕ್ಷದ ಕೈಲಿ ಇತ್ತು. ನಾನು ನಗರದ ಬಗ್ಗೆ ಒಂದು ಸಭೆ ಮಾಡಬೇಕಾದರೂ ಕಾಂಗ್ರೆಸ್ ನಾಯಕರ ಅಪ್ಪಣೆ ಬೇಕಾಗಿತ್ತು. ಆದರೆ ಅವರು ಒಪ್ಪುತ್ತಿರಲಿಲ್ಲ. ನಾನು ಸಿಎಂ ಆಗಿದ್ದಷ್ಟು ದಿನ ಬೆಂಗಳೂರು ರಿವ್ಯೂವ್ ಮೀಟಿಂಗ್ ಮಾಡುವ ಹಾಗಿರಲಿಲ್ಲ. ಇದು ಸತ್ಯ ಸಂಗತಿ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ಪ್ರಚಾರ ಪ್ರಿಯ ಸರಕಾರ: ಜನರು ಕಣ್ಣಿರಿನಲ್ಲಿ ಕೈ ತೊಳೆಯುತ್ತಿದ್ದರೆ ಸರಕಾರ ಪ್ರಚಾರದಲ್ಲಿ ಮುಳುಗಿದೆ. ಜಾಹೀರಾತುಗಳ ಮೂಲಕ ಸ್ವ ಪ್ರಶಂಸೆಯಲ್ಲಿ ಮುಳುಗಿದೆ. ಮೋದಿ, ಬೊಮ್ಮಾಯಿ ಇಬ್ಬರೂ ನವ ಭಾರತಕ್ಕಾಗಿ ನವ ಕರ್ನಾಟಕವೆಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಬೊಮ್ಮಾಯಿ ಅವರು ಮೋದಿ ಅವರಂತೆ ಡ್ರೆಸ್ ಮಾಡಿಕೊಂಡು ಫೋಟೋ ಶೂಟ್ ಮಾಡಿಸಿಕೊಂಡು ಬಸ್ ನಿಲ್ದಾಣಗಳ ಮೇಲೆ ಜಾಹೀರಾತುಗಳಲ್ಲಿ ಫೋಸು ಕೊಡುತ್ತಿದ್ದಾರೆ. ಇವರು ಏನು ಮಾಡಲು ಹೊರಟಿದ್ದಾರೆ? ನವ ಕರ್ನಾಟಕ ಏನು ಅನ್ನೋದು ನನಗೇ ಇನ್ನೂ ಅರ್ಥವಾಗಿಲ್ಲ. ಇವರಾದರೂ ನಮಗೆ ಹೇಳಲಿ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡರು. ಉತ್ತರ ಪ್ರದೇಶದಲ್ಲಿ ಹಲವು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಳೆ ಪ್ರವಾಹದಲ್ಲಿ ಜನರ ಬದುಕು ಕೊಚ್ಚಿ ಹೋಗುತ್ತಿದೆ. ನವ ಭಾರತ ಎಂದರೆ ಇದೇನಾ? ಎಂದು ಅವರು ಕಟುವಾಗಿ ಪ್ರಶ್ನೆ ಮಾಡಿದರು.

ಉತ್ತರ ಪ್ರದೇಶ ಘಟನೆ ಅಕ್ಷಮ್ಯ: ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕೇಂದ್ರದ ಮಂತ್ರಿಯ ಪುತ್ರ ವಾಹನ ಹತ್ತಿಸಿದ್ದಾರೆ. ಇದು ಹೇಯ ಮತ್ತು ಅಕ್ಷಮ್ಯ. ನಂತರ ನಡೆದ ಪ್ರತಿಭಟನೆಯಲ್ಲಿ ಇನ್ನಷ್ಟು ರೈತರು ಸಾವನ್ನಪ್ಪಿದ್ದಾರೆ. ಇದೇನಾ ನವ ಭಾರತ? ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯಲು ಹೊರಟಿರುವ ಬಿಜೆಪಿ ನವಭಾರತ ಕಟ್ಟುತ್ತಿರುವುದು ಹೀಗೆ ಎಂದು ಕೇಂದ್ರ ಸರಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X