Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೌಚಗುಂಡಿ ಸ್ವಚ್ಛತಾ ಕಾರ್ಮಿಕರ...

ಶೌಚಗುಂಡಿ ಸ್ವಚ್ಛತಾ ಕಾರ್ಮಿಕರ ಸಮೀಕ್ಷೆಗೆ 2 ತಿಂಗಳ ಗಡುವು ನೀಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ4 Oct 2021 9:01 PM IST
share
ಶೌಚಗುಂಡಿ ಸ್ವಚ್ಛತಾ ಕಾರ್ಮಿಕರ ಸಮೀಕ್ಷೆಗೆ 2 ತಿಂಗಳ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು, ಅ.4: ಮ್ಯಾನುಯೆಲ್ ಸ್ಕ್ಯಾವೆಂಜರ್ಸ್‍ಗಳ(ಕೈಗಳಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರ) ಸಮಗ್ರ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮನುಷ್ಯರಿಂದ ಮ್ಯಾನ್‍ಹೋಲ್ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರಕಾರಕ್ಕೆ ನಿರ್ದೇಶಿಸಲು ಕೋರಿ ಎಐಸಿಸಿಟಿಯುನ ಕರ್ನಾಟಕ ಘಟಕ ಹಾಗೂ ಇದೇ ವಿಚಾರವಾಗಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನೇತತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಈ ವೇಳೆ, ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ತಮಟೆ ಎಂಬ ಸ್ವಯಂಸೇವಾ ಸಂಸ್ಥೆ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದ ಮಂಡಿಸಿ, ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ನಡೆಸಲು ನ್ಯಾಯಾಲಯ ಹಿಂದೆಯೇ ನಿರ್ದೇಶನ ನೀಡಿದೆ. ಆದರೆ, ಈವರೆಗೆ ಆ ಕಾರ್ಯ ಆಗಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, `ಮ್ಯಾನುಯೆಲ್ ಸ್ಕಾವೆಂಜಿಂಗ್‍ಗಾಗಿ ಉದ್ಯೋಗ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ-2020ರ ಪ್ರಕಾರ ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ನಡೆಸಲು ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದು ಸರಕಾರ ಹೇಳಿದೆ. ಹೀಗಾಗಿ, ಎರಡು ತಿಂಗಳಲ್ಲಿ ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ಪೂರ್ಣಗೊಳಿಸುವಂತೆ  ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು.

ಅಲ್ಲದೇ, ರಾಮನಗರದಲ್ಲಿ ಶೌಚಗುಂಡಿಯಲ್ಲಿ ಬಿದ್ದು ಮತಪಟ್ಟ ಕಾರ್ಮಿಕರ ಮಕ್ಕಳಿಗೆ 1 ಸಾವಿರ ರೂ. ಸ್ಕಾಲರ್‍ಶಿಪ್ ನೀಡಲಾಗಿದೆ ಎಂದು ಸರಕಾರ ಹೇಳಿರುವುದು `ಕಣ್ಣೊರೆಸುವ ತಂತ್ರ'ವಾಗಿದೆ. ಮತ್ತೊಂದು ಕಡೆ 10 ಸಾವಿರ ಸ್ಕಾಲರ್‍ಶಿಪ್ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಸ್ಕಾಲರ್‍ಶಿಪ್ ತಿಂಗಳಿಗೆ ಅಥವಾ ವರ್ಷಕ್ಕೆ ಒಂದು ಬಾರಿ ಕೊಡಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಮನುಷ್ಯರಿಂದ ಮ್ಯಾನ್‍ಹೋಲ್ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ಅನ್ವಯ ಸ್ಕಾಲರ್‍ಶಿಪ್ ನೀಡುವುದು ಸರಕಾರದ ಬಾಧ್ಯತೆಯಾಗಿದೆ. ಆದರೆ, ಇದರಲ್ಲಿ ತಾರತಮ್ಯ ಇರಕೂಡದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸ್ಕಾಲರ್‍ಶಿಪ್ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ 30 ದಿನಗಳಲ್ಲಿ ಯೋಜನೆ ರೂಪಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿತು.

ರಾಮನಗರದಲ್ಲಿ ಶೌಚಗುಂಡಿಗೆ ಇಳಿದು ಮತಪಟ್ಟ ಮೂವರು ಹಾಗೂ ಕಲಬುರಗಿಯ ಕೈಲಾಶ್ ನಗರದಲ್ಲಿ ಶೌಚಗುಂಡಿ ಸ್ಚಚ್ಛಗೊಳಿಸುವ ವೇಳೆ ಮತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಸ್ಥರಿಗೆ 30 ದಿನಗಳಲ್ಲಿ ಪರ್ಯಾಯ ಉದ್ಯೋಗ ನೀಡಬೇಕು. ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳಿಗೆ ನೀಡಲಾಗುವ ಉಪಕರಣಗಳ ಸಮಗ್ರ ಪಟ್ಟಿಯಲ್ಲಿ  30 ದಿನಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X