ಉಡುಪಿ ಜಿಲ್ಲೆ: ಅ.9ರಂದು ಗೃಹ ಸಚಿವರ ಪ್ರವಾಸ
ಉಡುಪಿ, ಅ.4: ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅ.9ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವರು.
ಬೆಳಗ್ಗೆ 10.15ಕ್ಕೆ ಕಾಪುವಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 12 ಗಂಟೆಗೆ ಉಡುಪಿಯಲ್ಲಿ ನೂತನ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ, 2.30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಯಲ್ಲಿ ಪೊಲೀಸ್ ಘಟಕ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆ, ಸಂಜೆ 6ಗಂಟೆಗೆ ಕಾರ್ಕಳದಲ್ಲಿ ನಡೆಯುವ ಖಾಸಗಿ ಕಾರ್ಯಕ್ರದಲ್ಲಿ ಭಾಗವಹಿಸಿ, ನಂತರ 7ಗಂಟೆಗೆ ತೀರ್ಥಹಳ್ಳಿಯ ಗುಡ್ಡೆಕೊಪ್ಪಕ್ಕೆ ತೆರಳಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





