ಅ.5ರಿಂದ 6ನೇ ತರಗತಿ-ದ್ವಿತೀಯ ಪಿಯುವರೆಗೆ ಪೂರ್ಣ ಭೌತಿಕ ತರಗತಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ

ಮಂಗಳೂರು, ಅ.4: ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಅ.5ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳನ್ನು ನಡೆಸಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
ಈ ಆದೇಶವು ಸರಕಾರಿ, ಅನುದಾನಿತ, ಅನುದಾನ ರಹಿತ ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Next Story





