ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ, ಇಲ್ಲೇನಿದ್ದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ: ಸಚಿವ ಡಾ. ಅಶ್ವತ್ಥ ನಾರಾಯಣ

ಮೈಸೂರು,ಅ.4: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಇಲ್ಲೇನಿದ್ದರೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಎಂದಿಗೂ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದಿಲ್ಲ ಎಂಬ ನಡುಕ ಹುಟ್ಟಿದೆ. ಅದಕ್ಕೆ ಇಲ್ಲದ ಕಥೆ ಕಟ್ಟಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಒಡೆದು ಚೂರಾಗುತ್ತಿದೆ. ಯಾರು ನಾಯಕರಾಗುತ್ತಾರೆ ಎಂಬ ಹುಡುಕಾಟ ನಡೆಯುತ್ತಿದೆ. ಈ ನಡುವೆ ನಾನು ಸಿಎಂ ಆಗುತ್ತೇನೆ, ತಾನು ಸಿಎಂ ಆಗುತ್ತೇನೆ ಅಂತ ಕೆಲವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಶಾಸಕ ರಾಮದಾಸ್‍ಗೆ ಸಚಿವ ಸ್ಥಾನ ಕುರಿತು ಮಾತನಾಡಿ, ಶಾಸಕ ರಾಮದಾಸ್ ಅವರು ಎಂದಿಗೂ ಪಕ್ಷದ ನಾಯಕರಾಗಿ ಇದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ಸ್ಥಾನಮಾನಗಳು ಸಿಗಲಿವೆ ಎಂದರು.
Next Story





