Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರೌಢಶಾಲೆ ಹಂತದಲ್ಲೇ ‘ಟೆಕ್ನಾಲಜಿ...

ಪ್ರೌಢಶಾಲೆ ಹಂತದಲ್ಲೇ ‘ಟೆಕ್ನಾಲಜಿ ಸ್ಕೂಲ್’: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ5 Oct 2021 4:36 PM IST
share
ಪ್ರೌಢಶಾಲೆ ಹಂತದಲ್ಲೇ ‘ಟೆಕ್ನಾಲಜಿ ಸ್ಕೂಲ್’: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ/ಬೆಂಗಳೂರು, ಅ.5: ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡಬೇಕು. ಇದಕ್ಕಾಗಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು (ಟೆಕ್ನಾಲಜಿ ಸ್ಕೂಲ್ಸ್) ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ .

ಐ.ಟಿ/ಬಿಟಿ ಇಲಾಖೆ ವತಿಯಿಂದ ‘ಬಿಯಾಂಡ್ ಬೆಂಗಳೂರು’ (ಬೆಂಗಳೂರು ವ್ಯಾಪ್ತಿಯಾಚೆ) ಉಪಕ್ರಮದಡಿ ಮಂಗಳವಾರ ಏರ್ಪಡಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ (ಇನ್ನೊವೇಷನ್ ಅಂಡ್ ಇಂಪ್ಯಾಕ್ಟ್) ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿದ  ಅವರು, ಹುಬ್ಬಳ್ಳಿ ವಲಯದಲ್ಲಿ ಹೊಸ ತಾಂತ್ರಿಕತೆಯ ಉದ್ಯಮದ ಬೆಳವಣಿಗೆಗೆ ತಕ್ಷಣದಿಂದಲೇ ಆದ್ಯತೆಯ ಮೇಲೆ ಕ್ರಮ ವಹಿಸಲಾಗುವುದು ಎಂದರು.

1960ರಷ್ಟು ಹಿಂದೆಯೇ ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಟೆಕ್ನಾಲಜಿ ಹೈಸ್ಕೂಲ್ ಇತ್ತು. ಆದರೆ ತದನಂತರದಲ್ಲಿ ಅದನ್ನು ಮುಚ್ಚಲಾಯಿತು, ಮಕ್ಕಳಲ್ಲಿ ಗ್ರಹಿಕೆ ಶಕ್ತಿ ಹೆಚ್ಚಾಗಿರುವುದರಿಂದ ಹೈಸ್ಕೂಲ್ ಮಟ್ಟದಲ್ಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡುವುದು ಮುಖ್ಯ. ಹೀಗಾಗಿ ಕೆಲವು ಪ್ರೌಢಶಾಲಾ ಹಂತದಲ್ಲಿ ಪ್ರತ್ಯೇಕ ಟೆಕ್ನಾಲಜಿ ಸ್ಕೂಲ್ ಗಳನ್ನು ಆರಂಭಿಸುವುದು ಸೂಕ್ತ ಎಂದು ಅವರು ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಟಿಂಕರಿಂಗ್ ಲ್ಯಾಬ್ ಗಳನ್ನು ಮೇಲ್ದರ್ಜೆಗೇರಿಸಿ ಆ ಹಂತದಲ್ಲಿ ಸ್ವಲ್ಪ ಮಟ್ಟಿಗಾದರೂ ಕೃತಕ ಬುದ್ಧಿಮತ್ತೆಯನ್ನು (ಎಐ) ಅಳವಡಿಸುವ ಅಗತ್ಯವಿದೆ. 150 ಐಟಿಐ ಕಾಲೇಜುಗಳನ್ನು ಉನ್ನತ ದರ್ಜೆಗೇರಿಸಿರುವಂತೆಯೇ ಪಾಲಿಟೆಕ್ನಿಕ್ ಕಾಲೇಜುಗಳನ್ನೂ ಉನ್ನತ ದರ್ಜೆಗೇರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಹುಬ್ಬಳ್ಳಿ ಸಮಾರಂಭದಲ್ಲಿ ಹಾಜರಿದ್ದ ಐಟಿ/ಬಿಟಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಾತನಾಡಿ, ಎ.ಐ.(ಕೃತಕ ಬುದ್ಧಿಮತ್ತೆ) ಮತ್ತು ಡ್ಯಾಟಾ ಎಂಜಿನಿಯರಿಂಗ್ ಗೆ ಸಂಬಂಧಿಸಿದ ಉತ್ಕøಷ್ಠತಾ ಕೇಂದ್ರವನ್ನು (ಸೆಂಟರ್ ಆಫ್ ಎಕ್ಸ್ ಲೆನ್ಸ್) ಹುಬ್ಬಳ್ಳಿಯಲ್ಲಿ ಶೀಘ್ರವೇ ಸ್ಥಾಪಿಸಲಾಗುವುದು ಎಂದರು.

ಹೊಸ ತಾಂತ್ರಿಕ ಬೆಳವಣಿಗೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್.ಇ.ಪಿ-2020) ಆಶಯವಾಗಿದೆ. ಆ ಪ್ರಕಾರವಾಗಿ, ಶಾಲಾ ಮಟ್ಟದಲ್ಲಿ ಮುಂದಿನ ವರ್ಷದಿಂದಲೇ ಮಕ್ಕಳಿಗೆ ಕೋಡಿಂಗ್ ಕಲಿಕೆಯನ್ನು ಪಠ್ಯಕ್ರಮದ ಭಾಗವನ್ನಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ನಾವೀನ್ಯತಾ ತಂತ್ರಜ್ಞಾನಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಪರಿಣಾಮಕಾರಿ ಕಾರ್ಯನೀತಿಗಳನ್ನು ಸರಕಾರ ಜಾರಿಗೊಳಿಸಿದೆ. ವಿದ್ಯಾರ್ಥಿಗಳ ಇಂಟರ್ನ್ ಷಿಪ್ ಅವಧಿ 3 ವಾರಗಳಷ್ಟು ಇದ್ದುದನ್ನು ಈಗ 30 ವಾರಗಳಿಗೆ ಹೆಚ್ಚಿಸಲಾಗಿದೆ. ಇಂಟರ್ನ್ ಷಿಪ್ ಗಾಗಿ ವಿದೇಶಗಳಿಗೆ ಹೋಗುವುದಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.

ಶಾಸಕ ಅರವಿಂದ ಬೆಲ್ಲದ್ ಮಾತನಾಡಿ, ಹುಬ್ಬಳ್ಳಿ ವಲಯವನ್ನು ಹಾರ್ಡ್ ವೇರ್ ಉತ್ಪಾದನಾ ನೆಲೆಯನ್ನಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ನವೋದ್ಯಮ ದೂರದರ್ಶಿತ್ವ ಮಂಡಳಿ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಮಾತನಾಡಿ, ಎಐ (ಕೃತಕ ಬುದ್ಧಿಮತ್ತೆ) ಮತ್ತು ರೊಬೊಟಿಕ್ಸ್ ಗಳು ಈಗ ಪ್ರತಿಯೊಂದು ಕ್ಷೇತ್ರದ ಚಾಲಕ ಶಕ್ತಿಗಳಾಗಿವೆ. ಹೀಗಾಗಿ, ಎಐ ಆಧಾರಿತ ಕೃಷಿ ತಾಂತ್ರಿಕತೆ, ಕ್ಲೈಮೇಟ್ ಟೆಕ್, ಸ್ಪೇಸ್ ಟೆಕ್ ಉದ್ದಿಮೆಗಳನ್ನು ಹುಬ್ಬಳ್ಳಿ ವಲಯದಲ್ಲಿ ಸ್ಥಾಪಿಸುವುದು ಸೂಕ್ತ ಎಂದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಅಧ್ಯಕ್ಷ ಬಿ.ವಿ.ನಾಯ್ಡ ಮಾತನಾಡಿ, ಈಗ ಆನ್ ಲೈನ್ ಶಿಕ್ಷಣವನ್ನು ಎಲ್ಲರಿಗೂ ಸಿಗುವಂತೆ ಮಾಡಲು ವಿದ್ಯಾರ್ಥಿಗಳಿಗೆ ಟ್ಯಾಬ್ ಅನ್ನು ಕೊಡುವ ಯೋಜನೆಯನ್ನು ಸರಕಾರಗಳು ಹೊಂದಿವೆ. ಇದೇ ಸಂದರ್ಭದಲ್ಲಿ ಟ್ಯಾಬ್ ಗಳನ್ನು ಚೀನಾದಿಂದಲೋ ಮತ್ತೆಲ್ಲಿಂದಲೋ ಆಮದು ಮಾಡಿಕೊಳ್ಳುವ ಬದಲು ನಮ್ಮಲ್ಲೇ ಇವುಗಳನ್ನು ತಯಾರಿಸಲು ಏನು ಮಾಡಬಹುದು ಎಂಬುದರ ಬಗ್ಗೆ ಆಲೋಚಿಸಬೇಕು. ಬೆಂಗಳೂರಿನಾಚೆ ಉದ್ದಿಮೆಗಳನ್ನು ಸ್ಥಾಪಿಸುವ ಕಂಪನಿಗಳಿಗೆ ತೆರಿಗೆ ವಿನಾಯಿತಿ ಕೊಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಐಟಿ/ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೆಎಲ್‍ಇ ತಾಂತ್ರಿಕ ವಿ.ವಿ.ಕುಲಪತಿ ಅಶೋಕ್ ಎಸ್.ಶೆಟ್ಟರ್, ಏಕಸ್ ಕಂಪೆನಿಯ ಸಿ.ಇ.ಒ. ಅರವಿಂದ್ ಮಲ್ಲಿಗೇರಿ, ಡಾ.ಗುಡಸಿ, ಪ್ರೊ.ಮಹೇಶ್, ಸಂಜೀವ್ ಗುಪ್ತ, ವಿವೇಕ್ ಪವಾರ್, ಐ.ಟಿ/ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X