ಹಳೆಕೋಟೆ: ಉಚಿತ ಸಮವಸ್ತ್ರ, ಪುಸ್ತಕ ವಿತರಣೆ

ಮಂಗಳೂರು, ಅ.5: ಉಳ್ಳಾಲ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಯದ್ ಮದನಿ ಪ್ರೌಢಶಾಲೆಯಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ಮಂಗಳೂರು ದಕ್ಷಿಣ ವಲಯದ ಬಿಆರ್‌ಪಿ ನೀತಾ ಗಟ್ಟಿ ವಿತರಿಸಿದರು.
ಉಳ್ಳಾಲ ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮತ್ತು ಮಸ್ಜಿದ್ ಅಲ್ ಕರೀಮ್ ಅಧ್ಯಕ್ಷ ಹಾಜಿ ಮುಹಮ್ಮದ್ ತ್ವಾಹ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಉಳ್ಳಾಲ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್ .ತಲಪಾಡಿ ಪಿಲಾರ್ ಸೆಂಟರ್‌ನ ಸಂಪನ್ಮೂಲ ವ್ಯಕ್ತಿ ಹರೀಶ್, ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಅಲ್ತಾಫ್ ಯುಎಚ್, ಕೋಶಾಧಿಕಾರಿ ಕರೀಂ ಯು.ಎಚ್. ಸೈಯದ್ ಮದನಿ ಅರಬಿಕ್ ಟ್ರಸ್ಟಿನ ಉಪಾಧ್ಯಕ್ಷ ಇಬ್ರಾಹಿಂ ಎಂಎಚ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಮುಹಮ್ಮದ್ ಯುಎಚ್, ಶಾಲಾ ಸಂಚಾಲಕ ಮುಹಮ್ಮದ್ ಇಸ್ಮಾಯೀಲ್ ಹಾಜಬ್ಬ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಕೆಎಂಕೆ ಮಂಜನಾಡಿ ಸ್ವಾಗತಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಸಪ್ನಾ ವಂದಿಸಿದರು. ಶಿಕ್ಷಕಿ ಶಕೀಲಾ ಕಾರ್ಯಕ್ರಮ ನಿರೂಪಿಸಿದರು.







