Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿದೆ...

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿದೆ ರಾಜ್ಯದಲ್ಲೇ ಪ್ರಥಮ ನೈರ್ಮಲ್ಯ ಗಣತಿ

ವಾರ್ತಾಭಾರತಿವಾರ್ತಾಭಾರತಿ5 Oct 2021 7:01 PM IST
share

ಉಡುಪಿ, ಅ.5: ಉಡುಪಿ ಜಿಲ್ಲೆಯ ನೈರ್ಮಲ್ಯ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಲು ಮನೆ-ಮನೆಗಳ ನೈರ್ಮಲ್ಯ ಗಣತಿ ನಡೆಸಲಾಗುತ್ತಿದ್ದು, ಈ ಗಣತಿ ಯ ಆಧಾರದಲ್ಲಿ ಜಿಲ್ಲೆಯ ನೈರ್ಮಲ್ಯ ಸ್ಥಿತಿಗತಿಗಳ ಸುಧಾರಣೆಗೆ ಯೋಜನೆ ರೂಪಿಸಲಾಗುವುದು. ಈ ನೈರ್ಮಲ್ಯ ಗಣತಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿದೆ.

ಅಕ್ಟೋಬರ್ 2ರಿಂದ ಆರಂಭವಾಗಿರುವ ಈ ಗಣತಿ ಕಾರ್ಯಕ್ರಮವನ್ನು ಅ.12ಕ್ಕೆ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದೆ. ಈ ಸರ್ವೇಯಲ್ಲಿ ಜಿಲ್ಲೆಯ 155 ಗ್ರಾಮಗಳ 2.41 ಲಕ್ಷ ಮನೆಗಳನ್ನು ಸಂದರ್ಶಿಸಿ, ಆ ಮನೆಗಳ ನೈರ್ಮಲ್ಯ ಸ್ಥಿತಿಗತಿ ಬಗ್ಗೆ ಸಮಗ್ರ ವರದಿ ಪಡೆಯಲಾಗುತ್ತಿದೆ. ಇದಕ್ಕಾಗಿ ಪ್ರತೀ 1000 ಜನಸಂಖ್ಯೆಗೆ 4 ಜನ ಗಣತಿದಾರರಂತೆ ಒಟ್ಟು 800 ಮಂದಿಯನ್ನು ಸರ್ವೆ ಕಾರ್ಯಕ್ಕೆ ನಿಯೋಜಿಸಿದ್ದು, ಇವರಿಗೆ ಸಂಪೂರ್ಣ ತರಬೇತಿ ನೀಡಲಾಗಿದೆ.

ಈ ಗಣತಿಯಲ್ಲಿ ಕುಟುಂಬಗಳ ವೈಯಕ್ತಿಕ ಶೌಚಾಲಯದ ಬಳಕೆ, ಶೌಚಾಲಯ ತುಂಬಿದಾಗ ವಿಲೇವಾರಿ ವಿಧಾನದ ಬಗ್ಗೆ, ತ್ಯಾಜ್ಯವನ್ನು ಕುಟುಂಬ ಹಂತದಲ್ಲಿ ವಿಂಗಡಣೆ ಮತ್ತು ಅದರ ವಿಲೇವಾರಿ ವಿಧಾನ, ದ್ರವತ್ಯಾಜ್ಯ ನಿರ್ವ ಹಣೆ ವಿಧಾನ ಸೇರಿದಂತೆ ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

ಇದರೊಂದಿಗೆ ಕುಟುಂಬಗಳಿಗೆ ನೈರ್ಮಲ್ಯತೆ ಬಗ್ಗೆ ಹೆಚ್ಚಿನ ಮಾಹಿತಿ, ಅವಳಿಗುಂಡಿ ಶೌಚಾಲಯದ ಮಹತ್ವ, ಮ್ಯಾನುವಲ್ ಸ್ಯ್ಕಾವೆಂಜರ್ ಕಾಯಿದೆ, ಹಸಿ ತ್ಯಾಜ್ಯ ನಿರ್ವಹಣೆ ವಿಧಾನ, ಒಣತ್ಯಾಜ್ಯ ನಿರ್ವಹಣೆ, ಋತುಚಕ್ರ ತ್ಯಾಜ್ಯ ನಿರ್ವಹಣೆ, ಬೂದುನೀರು ನಿರ್ವಹಣೆ ಅಗತ್ಯತೆ ಬಗ್ಗೆ ಸಹ ಅರಿವು ಮೂಡಿಸಲಾಗುತ್ತಿದೆ.

ನರೇಗಾ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮನೆಯಲ್ಲಿ ಉತ್ಪತ್ತಿಯಾಗುವ ಅಶುದ್ಧ ನೀರಿನ ನಿರ್ವಹಣೆಗೆ ಬಚ್ಚಲು ಗುಂಡಿ (ಸೋಕ್ ಪಿಟ್) ನಿರ್ಮಾಣ, ಹಸಿತ್ಯಾಜ್ಯ ನಿರ್ವಹಣೆಗೆ ಪೌಷ್ಠಿಕ ತೋಟಗಳ ನಿರ್ಮಾಣ, ಎರೆಹುಳು ಘಟಕ, ಗೊಬ್ಬರಗುಂಡಿ ನಿರ್ಮಾಣ ಇತ್ಯಾದಿಗಳ ಬಗ್ಗೆ ಮಾಹಿತಿಯ ಜೊತೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆಗೆ ಗಂಗಾ ಯೋಜನೆಯಡಿ ವರ್ಷಪೂರ್ತಿ ಶುದ್ದ ಕುಡಿಯುವ ನೀರು ಒದಗಿಸುವ ಬಗ್ಗೆ ಸಹ ಸಾರ್ವಜನಿಕ ರಿಗೆ ಮಾಹಿತಿ ನೀಡುವುದರೊಂದಿಗೆ, ನೀರಿನ ಸಂಪರ್ಕವಿಲ್ಲದ ಮನೆಗಳ ಮಾಹಿತಿಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಇಂತಹ ಮನೆಗಳಿಗೆ ನಳ್ಳಿ ಸಂಪರ್ಕ ಒದಗಿಸಲು ಈ ಮಾಹಿತಿಗಳು ಸಹಾಯಕವಾಗಲಿವೆ.

ಗಣತಿ ಸಮಯದಲ್ಲಿ ಸಾರ್ವಜನಿಕರಿಗೆ ನೀಡಲು ಮುದ್ರಿಸಲಾಗಿರುವ ಮಾಹಿತಿ ಕೈಪಿಡಿಯಲ್ಲಿ ಪ್ರಥಮ ಬಾರಿಗೆ ಕ್ಯೂಆರ್ ಕೋಡ್ ಅಳವಡಿಸ ಲಾಗಿದ್ದು, ಇದನ್ನು ಸ್ಕ್ಯಾನ್ ಮಾಡುವ ಮೂಲಕ ಶೌಚಾಲಯ ಬಳಕೆಯ ಮಹತ್ವ, ಅವಳಿಗುಂಡಿ ಶೌಚಾಲಯ ನಿರ್ಮಾಣದ ಪ್ರಯೋಜನ, ಘನ ತ್ಯಾಜ್ಯ ನಿರ್ವಹಣೆ ವಿಧಾನ, ಪೈಪ್‌ಕಾಂಪೋಸ್ಟ್ ಅಳವಡಿಕೆ, ಋತುಚಕ್ರ ತ್ಯಾಜ್ಯ ನಿರ್ವಹಣೆ, ಇಂಗು ಗುಂಡಿ ನಿರ್ಮಾಣದ ಪ್ರಯೋಜನ, ಜಲಜೀವನ್ ಮಿಷನ್ ಯೋಜನೆ ಕುರಿತು ಅಳವಡಿಸಲಾಗಿರುವ 5 ವೀಡಿಯೋಗಳ ಮೂಲಕ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಪಂ ಪ್ರಕಟಣೆ ತಿಳಿಸಿದೆ.

ಈ ಗಣತಿಯಲ್ಲಿ ದೊರೆಯುವ ಮಾಹಿತಿಗಳ ಮೂಲಕ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರತೀ ಮನೆಯಲ್ಲಿ ನೈರ್ಮಲ್ಯ ಮತ್ತು ಕುಡಿಯುವ ನೀರು ಕುರಿತಂತೆ ಇರುವ ಅಗತ್ಯಗಳು, ಸಮಸ್ಯೆಗಳ ಕುರಿತಂತೆ ಸ್ಪಷ್ಟ ಮಾಹಿತಿ ದೊರಕಲಿವೆ. ಈ ಮಾಹಿತಿಯ ಆಧಾರದಲ್ಲಿ ಇಡೀ ಜಿಲ್ಲೆಗೆ ಸ್ವಚ್ಛ ಕುಡಿಯುವ ನೀರು ಒದಗಿಸಲು ಮತ್ತು ಶುಚಿತ್ವದ ಕಾರ್ಯಕ್ರಮಗಳನ್ನು ಆಯೋಜಿಸಿ, ಇಡೀ ಜಿಲ್ಲೆಯನ್ನು ಸಂಪೂರ್ಣ ನೈರ್ಮಲ್ಯ ಮತ್ತು ಸ್ವಚ್ಛ ಜಿಲ್ಲೆಯನ್ನಾಗಿಸಲು ಸಾಧ್ಯವಾಗಲಿದೆ.

-ಡಾ.ನವೀನ್ ಭಟ್ ವೈ., ಉಡುಪಿ ಜಿಪಂ ಸಿಇಓ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X